ಕಸಾಪ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ

Kasapa
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) 2024-25ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಸೆಪ್ಟೆಂಬರ್ 15ರವರೆಗೆ ದಂಡದ ಶುಲ್ಕ ರೂ. 50-00 ಹೆಚ್ಚುವರಿಯಾಗಿ ನೀಡಿ ಅರ್ಜಿ ಸಲ್ಲಿಸಬಹುದು.

ಪರಿಷತ್ತಿನ ಪುಸ್ತಕ ಮಾರಾಟ ಮಳಿಗೆಯಲ್ಲಿ 25 ರೂ. ಶುಲ್ಕ ಪಾವತಿಸಿ, ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿ ಪಡೆಯಬಹುದಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ವಿಳಾಸ ಸಹಿತ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿ ಅಂಚೆ ಮೂಲಕ ಅರ್ಜಿ ಪಡೆಯಬಹುದಾಗಿದೆ.

ಅಂತರ್ಜಾಲ ತಾಣ www.kasapa.in ಸಹ ಪಡೆದು ಕೊಳ್ಳಬಹುದು. ಇವರು ನಿಗದಿತ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ ರೂ.25/-ಗಳನ್ನು ಪ್ರತ್ಯೇಕವಾಗಿ ಪಾವತಿಸುವುದು.

ವಿವರಗಳಿಗೆ: ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು - 560018. ದೂರವಾಣಿ ಸಂಖ್ಯೆ : 080-26612991, 22423867, 26623584

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net