

ಮದ್ದೂರು: ನವರಾತ್ರಿಯ 4ನೇ ದಿನವಾದ ಭಾನುವಾರ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಕಾಶಿ ವಿಶ್ವೇಶ್ವರಸ್ವಾಮಿ ದೇವಸ್ಥಾನದಲ್ಲಿ ಶ್ರೀ ವಿಶಾಲಾಕ್ಷಿ ಅಮ್ಮನವರಿಗೆ ಕವಡೆ ಅಲಂಕಾರ ಮಾಡಲಾಗಿತ್ತು.
ಸಂಜೆ 5 ಗಂಟೆಗೆ ಪಾರಾಯಣ ಪ್ರಾರಂಭವಾಗಿ ರಾತ್ರಿ 8 ಗಂಟೆವರೆಗೆ ಮಹಾ ಮಂಗಳಾರತಿ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಭಕ್ತರು ಆಗಮಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು
ಪಟ್ಟಣದ ಪುರಾಣ ಪ್ರಸಿದ್ಧ ಶ್ರೀಮದ್ದೂರಮ್ಮ, ಶ್ರೀಎಲ್ಲಮ್ಮತಾಯಿ ಹಾಗೂ ತಾಲೂಕಿನ ಕೊಪ್ಪ ಗ್ರಾಮದ ಶ್ರೀಪಟ್ಟಲದಮ್ಮ, ಕೌಡ್ಲೆ ಗ್ರಾಮದ ಶ್ರೀಪಟ್ಟಲದಮ್ಮ ದೇವಾಲಯಗಳಲ್ಲೂ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಕ್ತರಿಗೆ ತೀರ್ಥ, ಪ್ರಸಾದ ವಿತರಣೆ ಮಾಡಲಾಯಿತು.