ಕವಲೆದುರ್ಗ ಭುವನಗಿರಿ ಸಂಸ್ಥಾನ ಮಠದ ಸ್ವಾಮೀಜಿ ಲಿಂಗೈಕ್ಯ; ಕರೊನಾ ಸೋಂಕಿತರಾಗಿದ್ದ ಶ್ರೀಗಳು

Kavaledurga
Published on

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಕವಲೆದುರ್ಗದ ಮಹಾಮಹತ್ತಿನ ಭುವನಗಿರಿ ಸಂಸ್ಥಾನಮಠದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಇಂದು ಲಿಂಗೈಕ್ಯರಾದರು. ಸ್ವಾಮೀಜಿ ಕೆಲವು ದಿನಗಳ ಹಿಂದೆ ಕರೊನಾ ಸೋಂಕಿಗೆ ಒಳಗಾಗಿದ್ದರು.

ಕರೊನಾ ಸೋಂಕಿತರಾಗಿದ್ದ ಸ್ವಾಮೀಜಿಯವರನ್ನು ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂರು ದಿನಗಳ ಹಿಂದೆ ಅವರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಅವರು ಲಿಂಗೈಕ್ಯರಾದರು.

ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ಕವಲೆದುರ್ಗ ಶ್ರೀಗಳು ಐದು ಪಿಎಚ್​ಡಿ ಪದವಿ ಪಡೆದಿದ್ದರು. ಜೊತೆಗೆ ತಮ್ಮ ಮಠದಲ್ಲಿ ಯಾವುದೇ ಸೇವಕರನ್ನು ಇಟ್ಟುಕೊಳ್ಳದೆ ಮಠದ ಎಲ್ಲ ಕೆಲಸವನ್ನು ತಾವೇ ಮಾಡುತ್ತಿದ್ದರು. ಅಲ್ಲದೆ ಮಠಕ್ಕೆ ಆಗಮಿಸುವ ಭಕ್ತರಿಗೆ ತಾವೇ ಅಡುಗೆ ಮಾಡಿ ದಾಸೋಹ ಮಾಡುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net