ಕಾವೇರಿಯನ್ಸ್ ಫೆಸ್ಟ್‌ಗೆ ಚಾಲನೆ

ಕಾವೇರಿಯನ್ಸ್ ಫೆಸ್ಟ್‌ಗೆ ಚಾಲನೆ
Published on

ಗೋಣಿಕೊಪ್ಪಲು: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಎರಡು ದಿನಗಳ ಕಾಲ ಆಯೋಜಿಸಿರುವ ಕಾವೇರಿಯನ್ಸ್ ಫೆಸ್ಟ್‌ಗೆ ಕಾಲೇಜು ಆವರಣದಲ್ಲಿರುವ ಕಾವೇರಿ ಪ್ರತಿಮೆಗೆ ಅತಿಥಿಗಳಿಂದ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ನಿವೃತ್ತ ಡೀನ್ ಸಿ. ಜಿ.ಕುಶಾಲಪ್ಪ ಅವರು ಟ್ರೋಫಿ ಅನಾವರಣಗೊಳಿಸಿ ಮಾತನಾಡಿ, ಕಾವೇರಿ ಕಾಲೇಜು ಕಳೆದ 57 ವರ್ಷಗಳಿಂದಲೂ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಉತ್ತಮವಾಗಿ ರೂಪಿಸುವಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದೀಗ ಕಾವೇರಿಯನ್ಸ್ ಫೆಸ್ಟ್ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಒಂದು ಸುಂದರ ವೇದಿಕೆ ಒದಗಿಸಿಕೊಟ್ಟಿದ್ದು, ಎಲ್ಲ ವಿದ್ಯಾರ್ಥಿಗಳು ಸೋಲು, ಗೆಲುವನ್ನು ಬದಿಗಿಟ್ಟು, ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಂಡು ಸಂಭ್ರಮಿಸಬೇಕು. ಅಲ್ಲದೆ ವಿದ್ಯಾಭ್ಯಾಸದ ನಂತರ ಬದುಕು ಸಾಗಿಸಲು ಕೊಡಗಿನಲ್ಲಿಯೇ ಸಾಕಷ್ಟು ಅವಕಾಶಗಳಿದ್ದು, ಅದರ ಸದುಪಯೋಗ ಪಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಕೆ. ಪಿ.ಅಚ್ಚಯ್ಯ ಮಾತನಾಡಿ, ಕಾವೇರಿ ಕಾಲೇಜು ಬಿಬಿಎ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಫುಡ್ ಫೆಸ್ಟ್ ಗೆ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾವೇರಿ ಎಜುಕೇಷನ್ ಸೊಸೈಟಿ ಖಜಾಂಚಿ ಸಿ.ಡಿ.ಮಾದಪ್ಪ ಮಾತನಾಡಿ, ಕಾವೇರಿ ಕಾಲೇಜಿನ ಎಲ್ಲ ಸಿಬ್ಬಂದಿ ಕಳೆದ ಹಲವು ದಿನಗಳಿಂದ ಶ್ರಮಪಟ್ಟು, ದಾನಿಗಳ ಸಹಕಾರದಿಂದ ಒಂದು ಉತ್ತಮ ಕಾರ್ಯಕ್ರಮ ಆಯೋಜಿಸಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪುಚ್ಛಿಮಾಡ ಸುಭಾಷ್ ಸುಬ್ಬಯ್ಯ, ಕಾವೇರಿ ಕಾಲೇಜು ಪ್ರಾಂಶುಪಾಲ ಡಾ.ಎಂ.ಬಿ. ಕಾವೇರಿಯಪ್ಪ, ಉಪ ಪ್ರಾಂಶುಪಾಲೆ ಪ್ರೊ.ಎಂ ಎಸ್. ಭಾರತಿ, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಸ್. ಎಸ್. ಮಾದಯ್ಯ, ಕಾವೇರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಕೆ. ಶ್ರೀನಿವಾಸ್, ಐಕ್ಯುಎಸಿ ಸಂಚಾಲಕಿ ಡಾ. ನಯನಾ ತಮ್ಮಯ್ಯ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಡಾ. ಪಿ.ಪಿ.ಸವಿತಾ, ಕೆ.ಕೆ.ಚಿತ್ರಾವತಿ, ಹಿರಿಯ ಉಪನ್ಯಾಸಕರಾದ ಎಂ. ಕೆ. ಪದ್ಮಾ, ಸಿ. ಪಿ. ಸುಜಯ ಕಚೇರಿ ಅಧೀಕ್ಷಕಿ ಟಿ.ಕೆ. ಲತಾ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net