ಸಾಮಾಜಿಕ ಕಳಕಳಿ ಜತೆ ಸೇವಾ ಮನೋಭಾವ ಬೇಕು

kaveri
Published on

ಕುಶಾಲನಗರ:

ಸಾಮಾಜಿಕ ಕಳಕಳಿಯೊಂದಿಗೆ ಪ್ರಾಮಾಣಿಕ ಸೇವಾ ಮನೋಭಾವದ ಮೂಲಕ ಪತ್ರಕರ್ತರು ವಸ್ತುನಿಷ್ಠ ವರದಿ ಮಾಡಿದಲ್ಲಿ ಮಾತ್ರ ಸಮಾಜ ಸುಧಾರಣೆ ಕಾಣಲು ಸಾಧ್ಯ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು. ಕುಶಾಲನಗರ ಪ್ರೆಸ್ ಕ್ಲಬ್ ಟ್ರಸ್ಟ್ ಮತ್ತು ವಿವಿಧ ಸಂಘಟನೆಗಳ ಆಶ್ರಯದಲ್ಲಿ ಕುಶಾಲನಗರದಲ್ಲಿ ಬುಧವಾರ ನಡೆದ ನಡೆದ ಅಂತಾರಾಷ್ಟ್ರೀಯ ಪತ್ರಿಕಾ ದಿನಾಚರಣೆ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ

ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದ ಜತೆಗೆ ಪತ್ರಿಕಾ ರಂಗವೂ ಗುರುತಿಸಿಕೊಂಡಿದೆ. ಯಾವುದೇ ಕ್ಷೇತ್ರದಲ್ಲಿ ಲೋಪ ದೋಷಗಳು ಕಂಡುಬAದಲ್ಲಿ ಪತ್ರಿಕಾ ರಂಗ ತನ್ನ ವರದಿಯ ಮೂಲಕ ತಿದ್ದುವಂಥÀ ಕೆಲಸ ಮಾಡುತ್ತದೆ ಎಂದರು.

ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಕೊಡ್ಲಿಪೇಟೆ ಕಿರಿ ಕೊಡ್ಲಿಮಠದ ಶ್ರೀ ಸದಾಶಿವ ಸ್ವಾಮೀಜಿ ಮಾತನಾಡಿ ಎಲೆಮರೆಕಾಯಿಯಂತೆ ತಮ್ಮದೇ ಆದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರೂ ಹಲವರು ಗುರುತಿಸಿಕೊಳ್ಳಲು ಮುಂದೆ ಬರುವುದಿಲ್ಲ ಅಂಥವರನ್ನ ಗುರುತಿಸಿ ಗೌರವಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಪತ್ರಕರ್ತರು ಶಿಕ್ಷಣ, ಆರೋಗ್ಯ ಕ್ರೀಡೆ ಸೇರಿದಂತೆ ಸಾಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ ಮಾತನಾಡಿ ಸೇವಾ ಮನೋಭಾವದೊಂದಿಗೆ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವವರನ್ನು ಸನ್ಮಾನಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಯುವ ಸಮೂಹ ದುಶ್ಚಟಗಳಿಂದ ದೂರವಾಗಿ ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ನವ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆAದರು.

ರಾಷ್ಟಿçÃಯ ಅಪರಾಧ ತಡೆ ಮತ್ತು ಮಾನವ ಹಕ್ಕುಗಳ ಭಾರತ ಪರಿಷತ್ ರಾಷ್ಟ್ರೀಯ ಸಂಯೋಜಕ ಜೆ. ಅಲ್ಬರ್ಟ್ ಮನೋರಾಜ್, ಕುಶಾಲನಗರ ಪ್ರೆಸ್ ಕ್ಲಬ್ ಅಧ್ಯಕ್ಷ ಎಚ್.ಎಂ. ರಘುಕೋಟಿ ಮಾತನಾಡಿದರು.

ಇದೇ ಸಂದರ್ಭ ಜಿಲ್ಲೆ ಹಾಗೂ ರಾಜ್ಯದ ನಾನಾ ಭಾಗಗಳ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಕಾವೇರಿ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕುಶಾಲನಗರ ತಹಸೀಲ್ದಾರ್ ಕಿರಣ್ ಜೆ. ಗೌರಯ್ಯ, ಮಾನವ ಹಕ್ಕುಗಳ ಭಾರತ್ ಪರಿಷತ್ ನ ಸಂಸ್ಥಾಪಕ ಅಧ್ಯಕ್ಷ ಡಾ. ಜಾನ್ ಜೆ. ಸಮುವೆಲ್ ಕಿಮ್, ಸಮಾಜ ಸೇವಕರಾದ ಕೆ.ಕೆ. ಮಂಜುನಾಥ್, ಹೆಬ್ಬಾಲೆ ನಟೇಶ್ ಗೌಡ, ಬರಮಣ್ಣ ಟಿ. ಬೆಟಗೇರಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net