ಕೊಡಗಿನ ಕುಲದೇವತೆ ಕಾವೇರಿ ಕೃತಿ ಬಿಡುಗಡೆ

mng-27oct-kaveri
Published on



ಮಂಗಳೂರು : ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಅವರ ಸಾಹಿತ್ಯ ಹಾಗೂ ಡಿಜಿಟಲ್ ಗ್ರಾಫಿಕ್‌ನ ಪರಿಕಲ್ಪನೆ ಮತ್ತು ವಿನ್ಯಾಸದಲ್ಲಿ ಮೂಡಿ ಬಂದಿರುವ ‘ ಕೊಡಗಿನ ಕುಲದೇವತೆ ಶ್ರೀ ಕಾವೇರಿ ‘ ಕೃತಿಯನ್ನು ಮಂಗಳೂರಿನ ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಾಂಡ ಕೃತಿ ಸೋಮಯ್ಯ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.
ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಬಿ.ಕೆ.ಗಣೇಶ್ ರೈ ಅವರು ಕಟ್ಟಿಕೊಟ್ಟಿದ್ದಾರೆ .ಈ
ಕೃತಿಯ ಮೂಲಕ ಓದುಗರಿಗೆ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು.
ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಗೌಡ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಘಟಕಿ
ಮಾಲತಿ ಶೆಟ್ಟಿ ಮಾಣೂರು ಉಪಸ್ಥಿತರಿದ್ದರು. ಡಾ. ಪ್ರಿಯ ಹರೀಶ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net