101ನೇ ದಿನಕ್ಕೆ ಕಾಲಿಟ್ಟ ಕಾವೇರಿ ಕ್ರಿಯಾ ಸಮಿತಿ ಪ್ರತಿಭಟನೆ

10
Published on

ಮೈಸೂರು: ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಒತ್ತಾಯಿಸಿ ಕಾವೇರಿ ಕ್ರಿಯಾ ಸಮಿತಿ ವತಿಯಿಂದ ನಡೆಯುತ್ತಿರುವ ಕಾವೇರಿ ಹೋರಾಟ ಬುಧವಾರಕ್ಕೆ 100 ದಿನ ಪೂರೈಸಿದೆ.

ನಗರದ ದೊಡ್ಡ ಗಡಿಯಾರದ ಮುಂಭಾಗದಲ್ಲಿ ಹೋರಾಟವನ್ನು ಮುಂದುವರಿಸಿರುವ ಪ್ರತಿಭಟನಾಕಾರರು, ಬುಧವಾರವಾರವೂ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.

ಕಾವೇರಿ ಜಲಾನಯನ ವ್ಯಾಪ್ತಿಯ ಜಲಾಶಯಗಳಲ್ಲಿ ನೀರು ಇಲ್ಲದೆ ಇದ್ದರೂ ತಮಿಳುನಾಡಿಗೆ ನಿರಂತರವಾಗಿ ನೀರನ್ನು ಬಿಡುವ ಮೂಲಕ ಕನ್ನಡಿಗರಿಗೆ ದ್ರೋಹ ಮಾಡಲಾಗುತ್ತಿದೆ. ಬೇಸಿಗೆ ಆರಂಭವಾಗಿದ್ದು, ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ನಗರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ. ಆದ್ದರಿಂದ ತಮಿಳುನಾಡಿಗೆ ಹರಿಯುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಸಮಿತಿ ಮುಖಂಡರಾದ ಜಯಪ್ರಕಾಶ್, ಮೂಗೂರು ನಂಜುಂಡಸ್ವಾಮಿ, ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಸೋಮೇಗೌಡ, ಕರ್ನಾಟಕ ಹಸಿರು ಸೇನೆ ಮುಖಂಡ ವರಕೊಡು ಕೃಷ್ಣೇಗೌಡ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net