ಅ.೧೭ ರಂದು ಕಾವೇರಿ ತೀರ್ಥೋದ್ಭವದ

thalacouvery
Published on

ಮಡಿಕೇರಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ.೧೭ ರಂದು ಬೆಳಗ್ಗೆ ೭ ಗಂಟೆ ೪೦ ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯಕಾಲ ನೆರವೇರಲಿದೆ.


ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.


ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತ ಎಂ.ವಿ.ವೆಂಕಟೇಶ್, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು.ಮೋಟಯ್ಯ ಇತರರು ಪಾಲ್ಗೊಳ್ಳಲಿದ್ದಾರೆ.


ನಾಳೆ ಭಕ್ತಿಗೀತೆ ಗಾಯನ ಕಾರ್ಯಕ್ರಮ: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ನಾಪೋಕ್ಲು ಹಾಗೂ ಮೂರ್ನಾಡು ಹೋಬಳಿ ಕ.ಸಾ.ಪ., ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ ಸಮಿತಿ, ಮಹಾದೇವ ಸ್ಪೋರ್ಟ್ಸ್ ಕ್ಲಬ್, ಬಲಮುರಿ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಕಾವೇರಿ ತೀರ್ಥೋದ್ಭವದ ಪ್ರಯುಕ್ತ ಕಾವೇರಿಯ ಎರಡನೆಯ ಪುಣ್ಯಕ್ಷೇತ್ರ ಬಲಮುರಿಯ ಶ್ರೀ ಅಗಸ್ತ್ಯೇಶ್ವರ ದೇವಸ್ಥಾನದಲ್ಲಿ ಭಕ್ತಿ ಗೀತೆ ಗಾಯನ ಕಾರ್ಯಕ್ರಮ ಅ.೧೮ ರಂದು ಬೆಳಗ್ಗೆ ೯ ಗಂಟೆಗೆ ನಡೆಯಲಿದೆ. ನಾಪೋಕ್ಲು ರವಿ ಓಂಕಾರ್ ಮ್ಯೂಸಿಕ್ ಹಾಗೂ ಸ್ಥಳೀಯ ಕಲಾವಿದರಿಂದ ಭಕ್ತಿಗೀತೆ ಗಾಯನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net