

ಅ.10ರಂದು ‘ ಸ್ವರಾಜ್ಯ-ಸುರಾಜ್ಯ’ ಕವಿಗೋಷ್ಠಿ
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್ ದ.ಕ.ಜಿಲ್ಲಾ ಸಮಿತಿಯ ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ‘ಸ್ವರಾಜ್ಯ-ಸುರಾಜ್ಯ’ ಕವಿಗೋಷ್ಠಿ ಅ.10ರಂದು ಮಧ್ಯಾಹ್ನ 2ಕ್ಕೆ ನಗರದ ಕೊಡಿಯಾಲ್‌ಬೈಲ್‌ನ
ಬೆಸೆಂಟ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.
ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಜತೆ ಕಾರ್ಯದರ್ಶಿ ಡಾ.ಅರ್ಜುನ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಸೆಂಟ್ ಮಹಿಳಾ ಕಾಲೇಜಿನ ಪ್ರಾಂಶುಪಾಲ
ಡಾ.ಸತೀಶ್‌ಕುಮಾರ್ ಶೆಟ್ಟಿ.ಪಿ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಗಿರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದೆ. 40ಕ್ಕೂ ಅಧಿಕ ಮಂದಿ ಕವಿಗಳು ಭಾಗವಹಿಸಲಿದ್ದಾರೆ ಎಂದು ಅಭಾಸಾಪ ದ.ಕ.ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪರಿಮಳ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.................................