ಡೆಂಘೆ-ಮಲೇರಿಯಾ ಜಾಗೃತಿ

29072022 kavital news
Published on

ಕವಿತಾಳ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಬಲ್ಲಟಗಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಗುರುವಾರ ಡೆಂಘೆ ಮತ್ತು ಮಲೇರಿಯಾ ಜಾಗೃತಿ ಜಾಥಾ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಡಾ. ಅಮೃತ ರಾಠೋಡ್ ಮಾತನಾಡಿ, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಗಮನ ಹರಿಸಬೇಕು. ಮನೆ ಮತ್ತು ಸುತ್ತಮುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು. ಸೊಳ್ಳೆಗಳ ನಿಯಂತ್ರಣಕ್ಕೆ ರಾತ್ರಿ ಮಲಗುವಾಗ ಪರದೆ ಬಳಸಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net