ಸರ್ಕಾರದ ಸವಲತ್ತು ಪ್ರಯೋಜನ ಪಡೆಯಿರಿ

ktl-1
ಕವಿತಾಳ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ನಮ್ಮ ಶಾಲೆ-ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಬಿಇಒ ಚಂದ್ರಶೇಖರ ದೊಡ್ಡಮನಿ ಉದ್ಘಾಟಿಸಿದರು. ಅಕ್ಷರ ದಾಸೋಹ ತಾಲೂಕು ಅಧಿಕಾರಿ ಕುಬೇರಪ್ಪ, ಇಸಿಒ ಮಹೇಶ , ಎಸ್ಡಿಎಂಸಿ ಸದಸ್ಯರಾದ ವೆಂಕಟೇಶ, ಶಿವಲಿಂಗಪ್ಪ, ಮುಖ್ಯ ಶಿಕ್ಷಕಿ ಮಂಜುಳಾ ಅಂಗಡಿ, ದೈಹಿಕ ಶಿಕ್ಷಕ ಗಿರೀಶ ಅಂಗಡಿ ಇತರರಿದ್ದರು.
Published on

ಕವಿತಾಳ: ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಲವು ಸವಲತ್ತು ನೀಡುತ್ತಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ ದೊಡ್ಡಮನಿ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ನಮ್ಮ ಶಾಲೆ - ನಮ್ಮ ಜವಾಬ್ದಾರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಡ ಮಕ್ಕಳಿಗೆ ಶಿಕ್ಷಣ ಒದಗಿಸಿ, ಪ್ರತಿಭಾವಂತರನ್ನಾಗಿಸಲು ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ, ಬಿಸಿಯೂಟ, ಕ್ಷೀರಬಾಗ್ಯ, ಶೂ ಭಾಗ್ಯ, ಪಠ್ಯ, ವಸ್ತ್ರಗಳನ್ನು ನೀಡುತ್ತಿದೆ. ಉನ್ನತ ವ್ಯಾಸಂಗಕ್ಕಾಗಿ ಸಹಾಯ ಮಾಡಲಾಗುತ್ತಿದೆ. ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಉನ್ನತ ಬದುಕು ಕಟ್ಟಿಕೊಳ್ಳಲು ಪ್ರೋತ್ಸಾಹಿಸಿ ಎಂದು ಕಿವಿಮಾತು ಹೇಳಿದರು.

ಪಾಲಕರ ಪ್ರಶ್ನೆ: ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವುದರಿಂದ ಉತ್ತಮ ಅಂಕ ಬಂದಿಲ್ಲ ಮತ್ತು ಕೆಲ ವಿದ್ಯಾರ್ಥಿಗಳು ಹತ್ತನೇ ತರಗತಿಯಲ್ಲಿ ನಪಾಸಾಗಿದ್ದಾರೆ. ಆದರೆ, ಖಾಸಗಿ ಮತ್ತು ವಸತಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಸರ್ಕಾರಿ ಶಾಲೆಯಲ್ಲಿ ಏಕಿಲ್ಲ ಎಂದು ಪಾಲಕರು ಪ್ರಶ್ನೆ ಮಾಡುತ್ತಿರುವುದು ಕಂಡುಬಂತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net