ಮತದಾನದ ದೃಶ್ಯ ಚಿತ್ರೀಕರಣ

voting-2
Published on

ಕವಿತಾಳ: ಅಮೀನಗಡ ಗ್ರಾಪಂ ವ್ಯಾಪ್ತಿಯ ಕೊಟೆಕಲ್‌ನಲ್ಲಿ ಮತದಾನ ಮಾಡಿರುವ ದೃಶ್ಯವನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿಕೊಂಡಿದ್ದಾರೆ. ಚುನಾವಣಾಧಿಕಾರಿಗಳು ವಿಡಿಯೋ ಮಾಡಿಕೊಂಡ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣ ದಾಖಲಿಸುವ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಅಧಿಕಾರಿಗಳು ವಿಡಿಯೋ ಡಿಲೀಟ್ ಮಾಡಿ ಮೊಬೈಲ್ ಕೊಟ್ಟು ಕಳುಹಿಸುವಂತೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net