

ಕವಿತಾಳ: ಪಾಮನಕಲ್ಲೂರು ಗ್ರಾಪಂ ವ್ಯಾಪ್ತಿಯ ಬೆಂಚಮರಡಿಯ ಹಳ್ಳದ ಹೂಳೆತ್ತುವ ಕಾಮಗಾರಿ ವೀಕ್ಷಣೆಗಾಗಿ ಕೇಂದ್ರದ ಗ್ರಾಮಿಣಾಭಿವೃದ್ಧಿ ಸಚಿವಾಲಯದ ನಿರ್ದೇಶಕ ಪಿ.ಶಿವಂಶಂಕರ ನೇತತೃತ್ವದ ತಂಡ ಬಂದಿದ್ದ ಸಂದರ್ಭದಲ್ಲೇ ಸ್ಥಳೀಯ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.
ಕೇಂದ್ರ ತಂಡದ ಅಧಿಕಾರಿಗಳು ಜಿಪಂ, ತಾಪಂ ಹಾಗೂ ಗ್ರಾಪಂ ಅಧಿಕಾರಿಗಳಿಗೆ ಮಾಹಿತಿ ಕೇಳುತ್ತಿರುವಾಗ ಕುಡಿವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿ ಮತ್ತು ಗ್ರಾಮಸ್ಥರ ಮಧ್ಯೆ ವಾಗ್ವಾದ ನಡೆದು, ಕೆಲವರು ಜಿಪಂ ಯೋಜನಾ ನಿರ್ದೇಶಕ ಶರಣಬಸವ, ಇಒ ಅಮರೇಶ ಯಾದವ ಹಾಗೂ ಪಿಡಿಒ ಕೃಷ್ಣ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಗೊಂದಲಗೊಂಡ ಕೇಂದ್ರ ತಂಡದ ಅಧಿಕಾರಿಗಳನ್ನು ಸ್ಥಳೀಯ ಅಧಿಕಾರಿಗಳು ವಾಹನದಲ್ಲಿ ಕಳುಹಿಸಿದ್ದಾರೆ. ಘಟನೆ ಕುರಿತು ಕವಿತಾಳ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಚಮರಡಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಹಳ್ಳದ ಹೂಳೆತ್ತುವ ಕಾಮಗಾರಿಯನ್ನು ಕೆಂದ್ರದ ತಂಡವು ವೀಕ್ಷಿಸುತ್ತಿರುವಾಗ ಸ್ಥಳಕ್ಕಾಗಮಿಸಿದ ನೂರಕ್ಕೂ ಅಧಿಕ ಜನರು ‘ಕುಡಿವ ನೀರಿನ ಸಮಸ್ಯೆ’ಯನ್ನು ಪರಿಹರಿಸುವಂತೆ ಒತ್ತಾಯಿಸಿದ್ದಾರೆ. ಕೆಂದ್ರ ತಂಡವು ನಿಮ್ಮ ಸಮಸ್ಯೆಯು ತಾಪಂ, ಗ್ರಾಪಂ ಆಡಳಿತವು ಪರಿಹರಿಸುತ್ತದೆ ಎಂದು ಹೇಳಿದ್ದಾರೆ. ಆದರೂ, ಕೆಲವರು ಅಧಿಕಾರಿಗಳ ವಿರುದ್ಧ ಆರೋಪ ಮಾಡುವುದಲ್ಲದೆ, ಹಲ್ಲೆ ನಡೆಸಿದ್ದಾರೆ. ಆಗ ಕೆಲವರು ಸಮಸ್ಯೆಯನ್ನು ಮಾತಿನ ಮೂಲಕ ಪರಿಹರಿಸಿಕೊಳ್ಳಬೇಕಿತ್ತು. ಅದುಬಿಟ್ಟು ಹಲ್ಲೆ ನಡೆಸಬಾರದಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮದಲ್ಲಿ ಘಟನೆಯಿಂದ ಸಾರ್ವಜನಿಕರಲ್ಲಿ ಆತಂಕ ಮನೆಮಾಡಿದೆ.
ಫೊಟೋ ಇದೆ 25.ಕೆಟಿಎಎಲ್.01