9ಎ ನಾಲೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸುವಂತೆ ಡಿಸಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಮನವಿ

180622 DC program at Heera Village
ಕವಿತಾಳ ಸಮೀಪದ ಹೀರಾ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತನಾಡಿದರು.
Published on

ಕವಿತಾಳ: ಸಿರವಾರ ತಾಲೂಕಿನ ಕುರಕುಂದ, ಮಲ್ಲಟ, ಕವಿತಾಳ, ಕಲಂಗೇರ ವ್ಯಾಪ್ತಿಯ ಕೃಷಿ ಜಮೀನಿಗೆ ನೀರೊದಗಿಸುವ 9ಎ ನಾಲೆಯ ಕಾಮಗಾರಿಯನ್ನು ಬೇಗ ಮುಗಿಸುವಂತೆ ಗುತ್ತಿಗೆದಾರರಿಗೆ ಸೂಚಿಸಬೇಕೆಂದು ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಕೋರಿದರು.

ಹೀರಾ ಗ್ರಾಮದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನವಲಕಲ್-ಹೀರಾ ಸಂಪರ್ಕ ರಸ್ತೆ ಹದಗೆಟ್ಟಿದ್ದು, ಅಭಿವೃದ್ಧಿಗೆ 6 ಕೋಟಿ ರೂಪಾಯಿ ಅನುದಾನ ನೀಡಬೇಕು. ಬುದ್ದಿನ್ನಿ ಚಿನ್ನದ ಗಣಿಯ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಬೇಕು ಎಂದು ಹೇಳಿದರು. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಫಲಾನುಭವಿಗಳಿಗೆ ಮಾಸಾಶನ ಮಂಜೂರಾತಿ ಪತ್ರ ನೀಡಲಾಯಿತು.

ಡಿಸಿಗೆ ರೈತರ ಮುತ್ತಿಗೆ: ಕಾರ್ಯಕ್ರಮದ ಬಗ್ಗೆ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಿಲ್ಲ ಎಂದು ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷೆ ಅನಿತಾ ಬಸವರಾಜ ಮಂತ್ರಿ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿಗೆ ಮುತ್ತಿಗೆ ಹಾಕಿದರು. ಕಸನದೊಡ್ಡಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಕೆಲಸ ನೀಡಬೇಕು, ರೈತರಿಗೆ ಗುಣಮಟ್ಟದ ಬೀಜ ನೀಡುವಂತೆ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net