

ಮಂಗಳೂರು: ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಆಶ್ರಯದಲ್ಲಿ ಸಧ್ಭಾವನಾ ದಿನ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಶಿವರಾಮ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿ, ಧರ್ಮ, ಪ್ರದೇಶ ಅಥವಾ ಭಾಷೆಯ ಭೇದ ಭಾವವಿಲ್ಲದೆ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸಬೇಕು ಎಂದರು.
ಕಾರ್ಯಕ್ರಮವನ್ನು ಸಂಯೋಜಿಸಿದ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸಂತೋಷ್‌ಪಿಂಟೋ ಸಧ್ಭಾವನಾ ದಿನಾಚರಣೆಯ ಪ್ರತಿಜ್ಞೆ ಬೋಧಿಸಿದರು. ವಿದ್ಯಾರ್ಥಿನಿಯರಾದ ಸವಿತಾ ಮತ್ತು ತಂಡದವರು ಸೌಹಾರ್ದ ಗೀತೆ ಹಾಡಿದರು. ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರಮೀಳಾ ಕೆ. ವಂದಿಸಿದರು.