ಕವಾಡಿಗರಹಟ್ಟಿ ವಿಷಜಲ ಪ್ರಕರಣ; ಮೃತರ ಸಂಖ್ಯೆ ಆರಕ್ಕೆ ಏರಿಕೆ

CTR Death Case
Published on

ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟಿದ್ದರು. ಇದರ ಜೊತೆಗೆ ಅನೇಕ ಜನ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

ಕಲುಷಿತ ನೀರು ಸೇವಿಸಿದ ಪರಿಣಾಮ ಚಿಕ್ಕಪುರ ಗ್ರಾಮದ ಕರಿಬಸಪ್ಪ(35) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ ಕರಿಬಸಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಚಿತ್ರದುರ್ಗ ತಾಲ್ಲೂಕಿನ ಚಿಕ್ಕಪುರ ಗ್ರಾಮದ ನಿವಾಸಿ ಕರಿಬಸಪ್ಪ ಜುಲೈ 30 ಹಾಗೂ 31ರಂದು ಕವಾಡಿಗರಹಟ್ಟಿಯಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಆಗಸ್ಟ್​ 1ರಂದು ಕರಿಬಸಪ್ಪಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕರಿಬಸಪ್ಪರನ್ನೂ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆ ಹಾಗೂ ಬಸವೇಶ್ವರ ಆಸ್ಪತ್ರೆಯಲ್ಲಿ ಕರಿಬಸಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ರಾತ್ರಿ ರೋಗಿಯನ್ನೂ ದಾವಣಗೆರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಕರಿಬಸಪ್ಪ ಸಹೋದರ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net