ಕವಾಡಿಗರಹಟ್ಟಿ ವಿಷಜಲ ಪ್ರಕರಣ; ಮೃತರ ಸಂಖ್ಯೆ ಏಳಕ್ಕೆ ಏರಿಕೆ

Shivamma Kawadigarahatti
Published on

ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಹಿಳೆಯೊಬ್ಬರು ಅಸುನೀಗಿದ್ದಾರೆ.

ಕಲುಷಿತ ನೀರು ಸೇವಿಸಿದ ಪರಿಣಾಮ ಕವಾಡಿಗರಹಟ್ಟಿ ನಿವಾಸಿ ಶಿವಮ್ಮ(70) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇವರನ್ನು ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಆಗಸ್ಟ್​ 1ರಂದು ಶಿವಮ್ಮರಿಗೆ ವಾಂತಿ, ಭೇದಿ ಕಾಣಿಸಿಕೊಂಡಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಶಿವಮ್ಮರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net