

ಮಧುಗಿರಿ: ಕರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಜೋನ್, ಸೀಲ್‌ಡೌನ್ ಮಾಡಿರುವ ಕಸಬಾ ವ್ಯಾಪ್ತಿಯ ಕೆ.ಸಿ.ರೊಪ್ಪ ಗ್ರಾಮವನ್ನು ಜಿಪಂ ಸಿಇಒ ಶುಭಾ ಕಲ್ಯಾಣ್ ಶುಕ್ರವಾರ ಪರಿಶೀಲಿಸಿದರು.
ಗ್ರಾಮದಲ್ಲಿ 70 ಮನೆಗಳಿದ್ದು, 334 ಜನಸಂಖ್ಯೆ ಇದೆ. ಸಂಪೂರ್ಣ ಗ್ರಾಮವನ್ನು ಬಫರ್‌ಜೋನ್ ಆಗಿ ಪರಿವರ್ತಿಸಲಾಗಿದೆ. ಗ್ರಾಮ ವೀಕ್ಷಣೆ ಮಾಡಿದ ಜಿಪಂ ಸಿಇಒ, ಕರೊನಾ ತಡೆಗೆ ಕೈಗೊಳ್ಳಬೇಕಾದ ಕ್ರಮಗಳು, ಕ್ವಾರಂಟೈನ್‌ನಲ್ಲಿರುವ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತ ವ್ಯಕ್ತಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಉಪವಿಭಾಗಾಧಿಕಾರಿ ಡಾ.ನಂದಿನಿದೇವಿ, ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ತಾಪಂ ಇಒ ದೊಡ್ಡಸಿದ್ದಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾತಿ ಸಿಬ್ಬಂದಿ ಇದ್ದರು.