ಕೆ.ಸಿ.ಜಿಯ ಜಯದೇವ ಕೇಂದ್ರದಲ್ಲಿ 24/7 ಸೇವೆ

KCG
Published on

ಬೆಂಗಳೂರು: ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡೇಕೇರ್ ಸೇವೆ ಒದಗಿಸುತ್ತಿರುವ ಜಯದೇವ ಸ್ಯಾಟಲೈಟ್ ಕೇಂದ್ರದಲ್ಲಿ ಹೃದ್ರೋಗಿಗಳಿಗೆ ಸೆ. 1 ರಿಂದ 24/7 ವೈದ್ಯಕೀಯ ಸೇವೆ ದೊರೆಯಲಿದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ತಿಳಿಸಿದ್ದಾರೆ.

ಇತ್ತೀಚೆಗೆ ಆರೋಗ್ಯ ಇಲಾಖೆಯು ಮಲ್ಲೇಶ್ವರದ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ 150 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯದೇವ ಸ್ಯಾಟಲೈಟ್ ಕೇಂದ್ರದಲ್ಲಿ 24 ಗಂಟೆಗಳ ಸೇವೆ ಒದಗಿಸುವಂತೆ ನಿರ್ದೇಶಕರಿಗೆ ಸೂಚಿಸಿದ್ದರು. ಇದಕ್ಕಾಗಿ ಅಗತ್ಯ ಸಿಬ್ಬಂದಿ ಮತ್ತು ಹಣ ಒದಗಿಸುವುದಾಗಿಯೂ ಹೇಳಿದ್ದರು.

ಸಿಎಂ ಸೂಚನೆಯಂತೆ ಇದೀಗ ಸಂಸ್ಥೆಯಲ್ಲಿ 24 ಗಂಟೆಗಳ ಸೇವೆ ಒದಗಿಸುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net