ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛ

11.npk-2
Published on

ನಾಪೋಕ್ಲು: ಮೂರ್ನಾಡು ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಸ್ಥಳೀಯ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕ ಸಂಘದ ಸದಸ್ಯರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಶ್ರಮದಾನ ನಡೆಸಿ ಗಮನ ಸೆಳೆದರು.
ಮೂರ್ನಾಡು ಸರ್ಕಾರಿ ಪ್ರಾಥಮಿಕ ಶಾಲೆಗೆ ಹೋಗುವ ಮಾರ್ಗ ಮತ್ತು ಶಾಲೆಯ ಆವರಣವನ್ನು ಕಾರ್ಯಕರ್ತರು ಭಾನುವಾರ ಶುಚಿಗೊಳಿಸಿ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net