ಸುಂಟಿಕೊಪ್ಪದಲ್ಲಿ ಕೊಡವಲ್ಯಾಂಡ್‌ಗೆ ಹಕ್ಕೋತ್ತಾಯ

18sunti02
filter: 0; jpegRotation: 0; fileterIntensity: 0.000000; filterMask: 0; module:1facing:0; hw-remosaic: 0; touch: (-1.0, -1.0); modeInfo: ; sceneMode: Auto; cct_value: 0; AI_Scene: (11, -1); aec_lux: 144.0; hist255: 0.0; hist252~255: 0.0; hist0~15: 0.0;
Published on

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

  • ಸುಂಟಿಕೊಪ್ಪ : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಸುಂಟಿಕೊಪ್ಪ ಕನ್ನಡ ವೃತ್ತದಲ್ಲಿ ಕೊಡವಲ್ಯಾಂಡ್ ಹಕ್ಕೋತ್ತಾಯಕ್ಕಾಗಿ ಭಾನುವಾರ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
    ಸಿಎನ್‌ಸಿ ಸಂಚಾಲಕ ಎನ್.ಯು.ನಾಚಪ್ಪ ಈ ಸಂದರ್ಭ ಮಾತನಾಡಿ, ಕೊಡವರು ಯಾವುದೇ ಕಾರಣಕ್ಕೂ ಭೂಮಿ ಮಾರಾಟ ಮಾಡಬಾರದು ಎಂದರು. ಕೊಡಗಿನ ನೆಲ, ಜಲ ಮತ್ತು ಸಂಸ್ಕೃತಿಯನ್ನು ಕೊಡವರು ಉಳಿಸಲು ಪಣ ತೊಡಬೇಕು. ಭೂಮಾಫಿಯಾದಿಂದ ಕೊಡವರ ಭೂಮಿ ಪರಭಾರೆಯಾಗುತ್ತಿದೆ. ಇದನ್ನು ತಡೆಗಟ್ಟಬೇಕು. ಕೊಡಗಿನ ಅರಣ್ಯ ನಾಶಕ್ಕೆ ಮೂಲನಿವಾಸಿಗಳು ಕಾರಣವಲ್ಲ ಬದಲಿಗೆ ಜಾಗತೀಕರಣದ ಹೆಸರಿನಲ್ಲಿ ದೊಡ್ಡ ಕೈಗಾರಿಕೋದ್ಯಮಿಗಳು ಕೊಡಗಿನ ಬೃಹತ್ ಕಾಫಿ ತೋಟವನ್ನು ಖರೀದಿಸಿ ರೆಸಾರ್ಟ್, ಹೋಂ ಸ್ಟೇ ಗಳನ್ನು ನಿರ್ಮಿಸಿ ಜಿಲ್ಲೆಯನ್ನು ಕಾಂಕ್ರೀಟ್ ಮಯ ಮಾಡುತ್ತಿರುವುದರಿಂದ ಕೊಡಗಿನಲ್ಲಿ ಭೂಕುಸಿತವಾಗುತ್ತಿದೆ. ಜಲಪ್ರಳಯವಾಗಲು ಕಾರಣವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ಎಂದು ಹೇಳಿದರು. ಕೊಡವ ಜನಾಂಗದವರನ್ನು ಬುಡಕಟ್ಟು ಮೀಸಲಾತಿಗೆ ಸೇರ್ಪಡೆಗೊಳಿಸಬೇಕೆಂದು ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿದೆ ಎಂದೂ ನಾಚಪ್ಪ ಉಲ್ಲೇಖಿಸಿದರು.
    ಮುಖಂಡ ಎಂ.ಎ.ವಸಂತ ಮಾತನಾಡಿದರು. ಸಿಎನ್‌ಸಿಯ ಸದಸ್ಯರಾದ ಪಿ.ಕೆ.ಮುತ್ತಣ್ಣ, ಬೊಟ್ಟೋಳಂಡ ಕುಮಾರ ಉತ್ತಪ್ಪ, ಚಿಕ್ಕಂಡ ಉತ್ತಪ್ಪ, ಚಿಕ್ಕಂಡ ಪೊನ್ನಪ್ಪ, ದಾಸಂಡ ಕಿರಣ್, ಶಿವು ಉತ್ತಯ್ಯ, ನಾಗಚೇಟ್ಟಿರ ಮನುಮಂದಣ್ಣ, ನಾಗಚೇಟ್ಟಿರ ನಂದ, ಕೇಚಿರಬಾಗೇಶ್,ಕೆಚೀರ ಪ್ರಿನ್ಸ್, ಕಲ್‌ಮಾಡಂಡ ಸುರೇಶ್,ಕಂಜಿತಂಡ ಐಯ್ಯಣ್ಣ, ದಾಸಂಡ ಜಗದೀಶ್ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net