ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

06sunti03
Published on

ಕಾನ್‌ಬೈಲು ಸರ್ಕಾರಿ ಹಿ.ಪ್ರಾ. ಶಾಲೆಯಲ್ಲಿ ಕಾರ್ಯಕ್ರಮ
ಸುಂಟಿಕೊಪ್ಪ : ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವತಿಯಿಂದ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಿಸಲಾಯಿತು.
ಗ್ರಾಮ ಪಂಚಾಯಿತಿ ಸದಸ್ಯ ಕೊಳಂಬೆ ಸುಭಾಷ್ ಈ ಸಂದರ್ಭ ಮಾತನಾಡಿ, ಮಕ್ಕಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದರು. ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರ, ಉಚಿತ ಭೋಜನ, ಕ್ಷೀರ ಭಾಗ್ಯ, ಆರೋಗ್ಯ ತಪಾಸಣೆ, ದಾನಿಗಳಿಂದ ಉಚಿತ ನೋಟ್ ಪುಸ್ತಕ ವಿತರಣೆ ವ್ಯವಸ್ಥೆ ಇದೆ. ಒಟ್ಟಾರೆ ಮಕ್ಕಳ ಸಮಗ್ರ ಬೆಳವಣಿಗೆಗೆ ಉತ್ತೇಜನ ನೀಡಲಾಗುತ್ತಿದೆ. ಆದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಇಳಿಮುಖಗೊಳ್ಳುತ್ತಿರುವುದು ವಿಷಾದ ಎಂದರು. ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವ ಮೂಲಕ ಸಮಗ್ರ ಪ್ರತಿಭಾ ವಿಕಸನಕ್ಕೆ ಬೆಂಬಲಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net