

ಬೇಲೂರು : ಬೇಲೂರು ಕ್ಷೇತ್ರದ ಯಾವ ಗ್ರಾಮದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಶಾಸಕ ಎಚ್.ಕೆ. ಸುರೇಶ್ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎರಡನೇ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗ ಬೇಸಿಗೆ ತಾಪ ಪ್ರಾರಂಭವಾಗುತ್ತಿದೆ. ಈಗಾಗಲೇ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಕಾಡುತ್ತಿದೆ. ಅಲ್ಲಿಗೆ ಟ್ಯಾಂಕ್ ಮೂಲಕ ನೀರು ಕೊಡುತ್ತಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ನೀರಿನ ಕೊರತೆ ಕಾಡಬಹುದಾಗಿದೆ. ಈಗಿನಿಂದಲೇ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕು ಎಂದರು.