

ಕೋಟ: ತಾಲೂಕು ಮಟ್ಟದ ಕೆಡಿಪಿ ಸಭೆ ಕೋಟತಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಮಾತನಾಡಿ, ಗ್ರಾಮ ಪಂಚಾಯಿತಿ ಜತೆಗೆ ಸಮನ್ವಯ ಸಾಧಿಸಿ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಮೆಸ್ಕಾಂ, ಕಂದಾಯ, ಕೃಷಿ ಸಹಿತ 17ಕ್ಕೂ ಹೆಚ್ಚು ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ವರದಿ ಮಂಡಿಸಿದರು. ಗ್ರಾ.ಪಂ ಉಪಾಧ್ಯಕ್ಷೆ ಸರಸ್ವತಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಅಶ್ವಿನಿ, ಪಂಚಾಯಿತಿ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ರಾಬರ್ಟ್ ರೋಡ್ರಿಗಸ್, ವಿದ್ಯಾ, ಜ್ಯೋತಿ, ಕೆ.ಸೀತಾ ಉಪಸ್ಥಿತರಿದ್ದರು. ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು. ಪಿಡಿಒ ರವೀಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.