

ಧಾರವಾಡ: ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ವಿವಿದ ಯೋಜನೆಗಳಿಗೆ ಬಿಡುಗಡೆಯಾಗುವ ಅನುದಾನವನ್ನು ಸಕಾಲದಲ್ಲಿ ಬಳಕೆ ಮಾಡಬೇಕು. ಅನುದಾನ ಬಳಕೆಯಾಗದೆ ಸರ್ಕಾರಕ್ಕೆ ವಾಪಸ್ ಹೋದರೆ ಸಂಬಧಿ೦ಸಿ ಇಲಾಖೆಯ ಅಽಕಾರಿಯ ವೇತನದಲ್ಲಿ ಕಡಿತ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ೪ನೇ ತ್ರೆÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಅನುದಾನ ಬಳಕೆ ಮಾಡದ ಅಽಕಾರಿಯನ್ನು ಹೊಣೆ ಮಾಡಿ ಅವರಿಂದ ವಸೂಲು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ನಿಗದಿತ ಅವಽಯಲ್ಲಿ ಅನುದಾನ ಸಂಪೂರ್ಣ ಬಳಕೆ ಆಗಬೇಕು ಎಂದು ಸೂಚಿಸಿದರು.
ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಶಿಫಾರಸು:
ಜೆಜೆಎಂ, ನೀರಾವರಿ, ಲೋಕೋಪಯೋಗಿ, ಇತರ ಇಲಾಖೆಗಳ ಕಾಮಗಾರಿ ಗುತ್ತಿಗೆ ಪಡೆಯುವ ಗುತ್ತಿಗೆದಾರರು ಉಪ ಗುತ್ತಿಗೆ ನೀಡಿ ಕಣ್ಮರೆಯಾಗುತ್ತಿದ್ದಾರೆ. ಗುತ್ತಿಗೆದಾರರು ಶಾಸಕರಿಗೂ ಸ್ಪಂದಿಸುತ್ತಿಲ್ಲ. ಕರೆ ಸ್ವೀಕರಿಸುವುದಿಲ್ಲ. ನೋಟಿಸ್ ಕೊಟ್ಟರೂ ಉತ್ತರಿಸುವುದಿಲ್ಲ. ಸಕಾಲಕ್ಕೆ ಕಾಮಗಾರಿ ಮುಗಿಸುತ್ತಿಲ್ಲ. ಹೀಗೆ ಉಪ ಗುತ್ತಿಗೆ ನೀಡುವ ಗುತ್ತಿಗೆದಾರರನ್ನು ಪತ್ತೆ ಮಾಡಿ ತಿಳಿಸಿ. ಅಂಥವರನ್ನು ಕಪ್ಪುಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವ ಲಾಡ್ ಎಚ್ಚರಿಕೆ ನೀಡಿದರು.