ಗ್ರಾಮೀಣ ಮಟ್ಟಕ್ಕಿಳಿದು ಕೆಲಸ ಮಾಡಿ

18 NMG 03 (2)
Published on
  • ನಾಗಮಂಗಲ : ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ತಾಲೂಕು ಕೇಂದ್ರ ಸ್ಥಾನದಲ್ಲಿರುವ ತಮ್ಮ ಕಚೇರಿಗಳನ್ನು ಬಿಟ್ಟು ಗ್ರಾಮಗಳಿಗೆ ತೆರಳಿ ಗ್ರಾಮೀಣ ಜನರ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದರು.ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂದಾಯ ಇಲಾಕೆ ಹಾಗೂ ತಾಪಂ ವ್ಯಾಪ್ತಿಯ ಸಮಸ್ಯೆಗಳು ಬಗೆಹರಿದರೆ ತಾಲೂಕಿನ ಅರ್ಧ ಸಮಸ್ಯೆಗಳು ಪರಿಹಾರವಾದಂತೆ.
    ಈ ಎರಡೂ ಇಲಾಖೆಯ ಅಧಿಕಾರಿಗಳು ಹಳ್ಳಿಗಳಿಗೆ ತೆರಳಿ ಕೆಲಸ ಮಾಡುವ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗಬೇಕು. ಗ್ರಾಮೀಣ ಜನರನ್ನು ಒಂದು ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆಸುವುದು ಅಂತ್ಯವಾಗಬೇಕು. ತಮ್ಮ ಇಲಾಕೆಗಳಿಗೆ ಸಾರ್ವಜನಿಕರು ಸಮಸ್ಯೆ ಹೇಳಿಕೊಂಡು ಬರುವಂತಹ ಅರ್ಜಿಗಳನ್ನು ಸ್ವೀಕರಿಸಿ ಅದು ಯಾವ ಹಂತದಲ್ಲಿದೆ ಅಥವಾ ಬಗೆಹರಿಸಲಾಗಿದೆಯೇ ಎಂಬುದನ್ನು ಒಂದು ನಕಲು ಪ್ರತಿಯೊಂದಿಗೆ ತಿಂಗಳ ಅಂತ್ಯದೊಳಗೆ ನನ್ನ ಕಚೇರಿಗೆ ತಲುಪಿಸಬೇಕು. ಇದರ ಮೇಲ್ವಿಚಾರಣೆಯನ್ನು ತಹಸೀಲ್ದಾರ್ ಮತ್ತು ಇಒ ವಹಿಸಬೇಕು ಎಂದು ಅವರು ಖಡಕ್ ಎಚ್ಚರಿಕೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net