ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕೆಡ್ಡಸ

New Project (7)
Published on

ಕಡಬ: ತಾಲೂಕಿನ ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತುಳುನಾಡಿನ ಕೆಡ್ಡಸ ಆಚರಣೆ ನಡೆಯಿತು.

ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಿರಿಯರು ಆಚರಿಸಿಕೊಂಡು ಬಂದಿರುವ, ತುಳು ಆಚಾರ-ವಿಚಾರ ಪದ್ಧತಿಗಳನ್ನು ಉಳಿಸಿ, ಪ್ರಕೃತಿ ಸಂರಕ್ಷಿಸುವುದು ನಮ್ಮೆಲ್ಲರ ಧರ್ಮ. ವಿದ್ಯಾರ್ಥಿಗಳು ಈ ದಿಶೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.

ಹೊಸಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಮಾಲತಿ ಭೂಮಿತಾಯಿಗೆ ಎಣ್ಣೆ ಬಿಟ್ಟು, ಭೂಮಿ ಪೂಜೆ ನೆರವೇರಿಸಿ, ಕೆಡ್ಡಸ ಆಚರಣೆ ಮಹತ್ವ ತಿಳಿಸಿದರು.

ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ ಸಂದರ್ಭೋಚಿತವಾಗಿ ಮಾತನಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ.ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಕೆಡ್ಡಸ ಕುರಿತ ಗೀತೆ ಹಾಡಿದರು. ಪ್ರೌಢಶಾಲಾ ಮುಖ್ಯಶಿಕ್ಷಕ ಗಾಯತ್ರಿ ಯು.ಎನ್.ಸ್ವಾಗತಿಸಿದರು. ಸಹಶಿಕ್ಷಕಿಯರಾದ ಸರಿತಾ, ಪವಿತ್ರಾ, ಭವ್ಯಾ ಕಾರ್ಯಕ್ರಮ ನಿರ್ವಹಿಸಿದರು. ಸಂಚಿತಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net