ಖರ್ಚಿನ ಮೇಲೆ ತೀವ್ರ ನಿಗಾ ಇರಲಿ

Keep a close eye on spending
ವಿಜಯಪುರ ಜಿಪಂ ಸಭಾಂಗಣದಲ್ಲಿ ವೆಚ್ಚ ವೀಕ ಐಆರ್​ಎಸ್​ ಅಧಿಕಾರಿ ಅನುಪಕುಮಾರ ಸಭೆ ನಡೆಸಿದರು. ಡಿಸಿ ಟಿ. ಭೂಬಾಲನ್​, ಸಿಇಒ ರಿಶಿ ಆನಂದ, ಎಸ್​ಪಿ ಋಷಿಕೇಶ ಸೋನಾವಣೆ ಮತ್ತಿತರರಿದ್ದಾರೆ.
Published on

ವಿಜಯಪುರ: ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳು ಮಾಡುವ ವೆಚ್ಚದ ಮೇಲೆ ತೀವ್ರ ನಿಗಾ ಇಡುವ ಕಾರ್ಯವಾಗಬೇಕು ಎಂದು ವಿಜಯಪುರ ಲೋಕಸಭಾ ಚುನಾವಣಾ ವೆಚ್ಚ ವೀಕ ಐಆರ್​ಎಸ್​ ಅಧಿಕಾರಿ ಅನುಪಕುಮಾರ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಶನಿವಾರ ಅವರು ಸಭೆ ನಡೆಸಿದರು.

ಯಾವುದೇ ಚುನಾವಣೆಯಾದರು ಕೂಡ ರ್ನಿಲಸುವಂತಿಲ್ಲ, ವಿಧಾನಸಭೆ ಚುನಾವಣೆಯಂತೆ ಲೋಕಸಭಾ ಚುನಾವಣೆಯನ್ನೂ ಅಷ್ಟೇ ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಗಳು ಮಾಡುವ ಖರ್ಚುಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕು.

ಬ್ಯಾಂಕ್​ಗಳಲ್ಲಿ ಹೊಸ ಖಾತೆ ತೆರೆಯಲಾಗುತ್ತಿದೆಯಾ? ಎಂದು ಪರಿಶೀಲಿಸಿ ಮತ್ತು ಆ ಖಾತೆಗಳಿಗೆ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ವರ್ಗಾವಣೆಯಾಗುತ್ತಿದೆಯಾ? ಎಂಬುದನ್ನು ವಿಚಾರಿಸಿ ಖಚಿತಪಡಿಸಿಕೊಳ್ಳಬೇಕು. ಚೆಕ್​ಪೋಸ್ಟ್​ಗಳಲ್ಲಿ ಕಾಟಾಚಾರಕ್ಕೆ ಮಾಡಿದಂತೆ ತಪಾಸಣೆಯಾಗಬಾರದು, ಕಟ್ಟುನಿಟ್ಟಾಗಿ ಪರಿಶೀಲಿಸುವುದರೊಂದಿಗೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.

ಮದ್ಯದಂಗಡಿಗಳಲ್ಲಿ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಮಟ್ಟದ ಸಾರಾಯಿ ಮಾರಾಟವಾದಲ್ಲಿ ತಣ ಗಮನಕ್ಕೆ ತರಬೇಕು, ಮಹಾರಾಷ್ಟ್ರ ರಾಜ್ಯಕ್ಕೆ ಗಡಿಭಾಗ ಜಿಲ್ಲೆಯಾಗಿರುವುದರಿಂದ ಅಬಕಾರಿ ಇಲಾಖಾ ಅಧಿಕಾರಿ ಕಟ್ಟುನಿಟ್ಟಾಗಿ ಕೆಲಸ ನಿರ್ವಹಿಸಿ ಅಲ್ಲದೇ ಪ್ರಿಂಟಿಂಗ್​ ಪ್ರೆಸ್​ಗಳ ಮೇಲೆ ಕೂಡ ನಿಗಾ ಇಡುವುದು ಅವಶ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್​ ಮಾತನಾಡಿ, ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಜ. 22 ರಂದು ಹೊರಡಿಸಲಾದ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು 19,19,048 ಮತದಾರರಿದ್ದು, ಈ ಪೈಕಿ 9,76,073 ಪುರುಷ, 9,42,757 ಮಹಿಳಾ ಹಾಗೂ 218 ತೃತೀಯ ಲಿಂಗ ಮತದಾರಿರುತ್ತಾರೆ, ಗ್ರಾಮೀಣ ಭಾಗದಲ್ಲಿ 1507 ಹಾಗೂ ಪಟ್ಟಣ ಪ್ರದೇಶದಲ್ಲಿ 578 ಸೇರಿ ಒಟ್ಟು 2085 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಸುಗಮ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣೆ ಜರುಗಿಸುವ ದೃಷ್ಟಿಯಿಂದ ಒಟ್ಟು 167 ಸೆಕ್ಟರ್​ ಅಧಿಕಾರಿ, 72 ಫ್ಲಾಯಿಂಗ್​ ಸ್ವಾ$್ಯಡ್​, 87 ಸ್ಟೆಟಿಕ್​ ಸರ್ವಲೈನ್ಸ್​ ತಂಡ, 24 ವಿಡಿಯೋ ಸರ್ವಲೈನ್ಸ್​ ಹಾಗೂ 8 ವಿಡಿಯೋ ವ್ಹಿಂಗ್​ ತಂಡ ರಚಿಸಲಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಜಿಪಂ ಸಿಇಒ ರಿಶಿ ಆನಂದ ಮಾತನಾಡಿ, ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್​ ಸಮಿತಿಯಿಂದ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಕಳೆದ ಬಾರಿ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಪ್ರದೇಶಗಳನ್ನು ಗುರುತಿಸಿ ಆ ಪ್ರದೇಶಗಳಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಮನೆ ಮನೆಗೆ ಭೇಟಿ ನೀಡುವ ಮತ್ತು ಸೈಕಲ್​ ಜಾಥಾ ಹಾಗೂ ಬೈಕ್​ ರ್ಯಾಲಿ ಹಮ್ಮಿಕೊಂಡು ಜನರಲ್ಲಿ ಮತ ಚಲಾಯಿಸಲು ಜಾಗೃತಿ ಮೂಡಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 29 ಚೆಕ್​ ಪೋಸ್ಟ್​ಗಳನ್ನು ಸ್ಥಾಪಿಸಿ ತೀವ್ರ ನಿಗಾ ಇರಿಸಲಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net