ಬಸ್‌ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಿ

16 ckm 2
ಚಿಕ್ಕಮಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ದಿಢೀರ್ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದರು. ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ಬಸ್ ನಿಲ್ದಾಣವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜತೆಗೆ ನಿಲ್ದಾಣದ ಆವರಣದಲ್ಲಿರುವ ಮಳಿಗೆಗಳಲ್ಲಿ ತಿಂಡಿ ತಿನಿಸುಗಳನ್ನು ಸುರಕ್ಷಿತವಾಗಿಟ್ಟುಕೊಂಡು ಸಾರ್ವಜನಿಕರಿಗೆ ಶುಚಿಯಾದ ಆಹಾರ ಪದಾರ್ಥಗಳನ್ನು ನೀಡಬೇಕು ಎಂದು ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು.
ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸ್ವಚ್ಛತೆಯಿಲ್ಲ ಎಂಬ ಬಗ್ಗೆ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಬಸ್‌ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಂತೆ ಮಳಿಗೆಗಳ ಮಾಲೀಕರಿಗೆ ಸೂಚನೆ ನೀಡಿದರು. ಬೇಸಿಗೆ ಸಮೀಪಿಸುತ್ತಿರುವುದರಿಂದ ಸಾರ್ವಜನಿಕರು ರೋಗ ರುಜಿನಗಳಿಗೆ ತುತ್ತಾಗುವ ಸಂಭವ ಹೆಚ್ಚಾಗಿರುತ್ತದೆ. ಈ ವೇಳೆ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಸ್ವಚ್ಛತೆ ಕಾಪಾಡದ ಅಂಗಡಿಗಳ ಪರವಾನಗಿ ರದ್ದುಗೊಳಿಸಿ ಅಂಗಡಿಗೆ ಬೀಗ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಾಗರಿಕರು ತಮ್ಮ ಮನೆಗಳ ಮುಂದೆ ಸ್ವಚ್ಛತೆ ಕಾಪಾಡಬೇಕು. ಡೆಂೆ ಜ್ವರ ಹರಡುತ್ತಿರುವುದರಿಂದ ಚರಂಡಿ ಹಾಗೂ ನೀರು ಸಂಗ್ರಹಿಸುವ ತೊಟ್ಟಿಗಳನ್ನು ಸ್ವಚ್ಛವಾಗಿಡಬೇಕು. ಪರಿಸರ ಕಾಪಾಡಲು ಪ್ಲಾಸ್ಟಿಕ್ ಬದಲು ಬಯೋ ಪ್ಲಾಸ್ಟಿಕ್ ಬಳಸುವಂತೆ ಮನವಿ ಮಾಡಿದರು.
ನಗರಸಭೆ ಆಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ, ಬಸ್‌ನಿಲ್ದಾಣದಲ್ಲಿ ಶೌಚಗೃಹದ ಪಕ್ಕದಲ್ಲೇ ತಿಂಡಿ ತಿನಿಸು ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ. ಈ ಬಗ್ಗೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಇಡೀ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಗರಿಕರು ಸ್ವಚ್ಛತೆ ಕಾಪಾಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net