ಶಾಲೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ

29Athanigrameen1
Published on

ಅಥಣಿ ಗ್ರಾಮೀಣ: ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಹಾವು ಕಚ್ಚಿದ ಘಟನೆ ಹಿನ್ನೆಯಲ್ಲಿ ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಅನುದಾನಿತ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗೆ ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಪ್ಪ ಮುಂಜೆ ನೇತೃತ್ವದ ತಂಡ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಲೆಗೆ ಕಾಂಪೌಂಡ್ ಇರದಿರುವುದು. ಶಾಲೆ ಸುತ್ತಮುತ್ತ ಕಸದ ರಾಶಿ, ಕೊಳಚೆ ನೀರು ಸಂಗ್ರಹಗೊಂಡಿರುವು ಕಂಡು ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರನ್ನು ತರಾಟೆ ತೆಗೆದುಕೊಂಡರು. ಕೊಠಡಿ, ಅಡುಗೆ ಕೋಣೆ, ದಾಸ್ತಾನು ಕೊಠಡಿ ಹಾಗೂ ಶಾಲಾ ಆವರಣ ಶುಚಿಯಿಟ್ಟುಕೊಳ್ಳಬೇಕು. ಶಾಲೆಗೆ ತಡೆಗೋಡೆ ನಿರ್ಮಿಸಬೇಕು. ವಿದ್ಯಾರ್ಥಿಗಳ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು. ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಮೇಲಧಿಕಾರಿಗೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಬಿಆರ್‌ಸಿ ಸಮನ್ವಯಾಧಿಕಾರಿ ಗೌಡಪ್ಪ ಖೋತ, ಸಂಸ್ಥೆಯ ಅಧ್ಯಕ್ಷ ಮಹಾದೇವ ಮಗರ ಹಾಗೂ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net