

ಗುಂಡ್ಲುಪೇಟೆ: ರಾಷ್ಟ್ರೀಯ ಡೆಂೆ ದಿನಾಚರಣೆ ಅಂಗವಾಗಿ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಪಟ್ಟಣದ ಸರ್ಕಾರಿ ಕೈಗಾರಿಕಾ ಸಂಸ್ಥೆ ಆವರಣದಲ್ಲಿ ಜಾಥಾ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷಾ ಮಾತನಾಡಿ, ವಿದ್ಯಾರ್ಥಿಗಳಿಗೆ ಡೆಂೆ ಜ್ವರ ಬರುತ್ತಿದ್ದು, ಇದು ಮಾರಣಾಂತಿಕ ಕಾಯಿಲೆಯಾಗಿದೆ. ಸಾಂಕ್ರಾಮಿಕ ರೋಗವಾದ ಇದು ಒಬ್ಬರಿಂದ ಒಬ್ಬರಿಗೆ ಹರಡುವುದರಿಂದ ಇದರ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು.
ಈಡಿಸ್ ಈಜಿಪ್ಟ್ ಎಂಬ ಹೆಣ್ಣು ಸೊಳ್ಳೆ ಸೋಂಕಿತ ಡೆಂೆ ಕಾಯಿಲೆ ಇರುವ ವ್ಯಕ್ತಿಯನ್ನು ಕಚ್ಚಿದ ನಂತರ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ ಈ ಕಾಯಿಲೆ ಬರುತ್ತದೆ. ಈ ಸೊಳ್ಳೆಗಳು ಹಗಲಿನಲ್ಲಿ ಕಚ್ಚುವುದರಿಂದ ಮನೆ ಹಾಗೂ ಕಾರ್ಯಚಟುವಟಿಕೆ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಮನೆಯ ಕಿಟಕಿ ಮತ್ತು ಬಾಗಿಲು ಹಾಗೂ ಮಲಗುವಾಗ ಸೊಳ್ಳೆ ಪರದೆ ಉಪಯೋಗಿಸುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು ಎಂದರು.
ಮನೆಯ ನೀರಿನ ತೊಟ್ಟಿಗಳು, ತೆಂಗಿನ ಚಿಪ್ಪು, ಹಳೆಯ ಟೈರುಗಳಲ್ಲಿ ನೀರು ನಿಂತರೆ ಸೊಳ್ಳೆಗಳು ಮೊಟ್ಟೆಯಿಟ್ಟು ಮರಿಗಳನ್ನು ಮಾಡುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಮನೆ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಡುವ ಜತೆಗೆ ಕೊಳಚೆ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕಾಲೇಜು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಇದ್ದರು.