ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಲಿ

oppo_2
ಹನೂರಿನಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಡಾ.ರೇಖಾ ಮಾತನಾಡಿದರು. ಡಾ.ಪ್ರಕಾಶ್, ನಿಂಬೇಶ್, ಭಾಸ್ಕರ್ ಇತರರು ಇದ್ದರು.
Published on

ಹನೂರು: ಡೆಂೆ ತಡೆಗಟ್ಟುವಿಕೆ ಸಂಬಂಧ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದರ ಜತೆಗೆ ಈ ಬಗ್ಗೆ ಪಾಲಕರಿಗೂ ಮನವರಿಕೆ ಮಾಡಿಕೊಡಬೇಕು ಎಂದು ಕೀಟ ಶಾಸ್ತ್ರಜ್ಞೆ ಡಾ.ರೇಖಾ ತಿಳಿಸಿದರು.

ಡೆಂೆ ತಡೆಗಟ್ಟುವಿಕೆ ಸಂಬಂಧ ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ತಾಲೂಕು ಆರೋಗ್ಯಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಆಯೋಜಿಸಿದ್ದ ತಾಲೂಕು ಮಟ್ಟದ ಅಡ್ವೋಕೆಸಿ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಡೆಂೆ ಜ್ವರ ಸೊಳ್ಳೆಯ ವೈರಸ್‌ನಿಂದ ಹರಡಲಿದ್ದು, ಈ ರೋಗಕ್ಕೆ ಯಾವುದೇ ಚಿಕಿತ್ಸೆ ಇಲ್ಲ. ಆದ್ದರಿಂದ ಸೊಳ್ಳೆಯ ಸಾಂಧ್ರತೆಯನ್ನು ಕಡಿಮೆ ಮಾಡುವ ಮೂಲಕ ರೋಗವನ್ನು ನಿಯಂತ್ರಣಕ್ಕೆ ತರಬಹುದು. ಹಾಗಾಗಿ ನೀರು ಸಂಗ್ರಹಣೆಯ ತೊಟ್ಟಿ, ಬಿಸಾಡಿದ ತೆಂಗಿನ ಚಿಪ್ಪು, ಹೊಡೆದ ಬಾಟಲಿ, ಪ್ಲಾಸ್ಟಿಕ್ ಲೋಟ ಹಾಗೂ ಟಯರ್‌ಗಳನ್ನು ತೆರವುಗೊಳಿಸಬೇಕು. ವಾರದಲ್ಲಿ ಒಂದು ದಿನ ಸಂಗ್ರಹಿಸಿರುವ ನೀರನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು ಎಂದು ಸಲಹೆ ನೀಡಿದರು.

ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನಿದ್ರಿಸುವಾಗ ಸೊಳ್ಳೆ ಪರದೆ ಬಳಕೆ ಮಾಡಬೇಕು. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಮೂಲಕ ನೈರ್ಮಲ್ಯ ಕಾಪಾಡುವಂತೆ ಸಲಹೆ ನೀಡಬೇಕು ಎಂದು ತಿಳಿಸಿದರು.

ಸೊಳ್ಳೆಗಳಿಂದ ರೋಗ ಹರಡುವ, ತಡೆಗಟ್ಟುವ ವಿಧಾನ ಹಾಗೂ ಸೊಳ್ಳೆಗಳು ಉತ್ಪತ್ತಿಯಾಗುವ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿ ಕೊಡಲಾಯಿತು. ಕಾರ್ಯಕ್ರಮದಲ್ಲಿ ರೋಗವಾಹಕ ಆಶ್ರಿತ ರೋಗಗಳ ಜಿಲ್ಲಾ ನಿಯಂತ್ರಣಾಧಿಕಾರಿ ಡಾ.ರಾಜೇಶ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಹಿರಿಯ ಆರೋಗ್ಯ ನಿರೀಕ್ಷಕರಾದ ನಿಂಬೇಶ್, ಭಾಸ್ಕರ್, ಪ್ರಯೋಗಾಲಯದ ಹಿರಿಯ ತಜ್ಞ ದ್ವಾರಕೀಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net