ಗೋಪಾಲಕೃಷ್ಣ ದೇಲಂಪಾಡಿಗೆ ಕೀರಿಕ್ಕಾಡು ಪುರಸ್ಕಾರ ಪ್ರದಾನ

New Project (13)
Published on

ಮುಳ್ಳೇರಿಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ 80ರ ಸಂಭ್ರಮ ಕಾರ್ಯಕ್ರಮ, ಕೀರಿಕ್ಕಾಡು ಪುರಸ್ಕಾರ ಪ್ರದಾನ ಹಾಗೂ ಆರೋಗ್ಯ ತರಬೇತಿ ಶಿಬಿರ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ಭಾನುವಾರ ನಡೆಯಿತು.

ಕೀರಿಕ್ಕಾಡು ಪುರಸ್ಕಾರವನ್ನು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಅವರಿಗೆ ಪ್ರದಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕೇರಳ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯಶಿಕ್ಷಕ ಡಿ.ರಾಮಣ್ಣ ಮಾಸ್ತರ್ ಅಭಿನಂದನಾ ಭಾಷಣ ಮಾಡಿದರು. ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ.ರಮಾನಂದ ಬನಾರಿ, ಕಾರ್ಯದರ್ಶಿ ವಿಶ್ವವಿನೋದ ಬನಾರಿ, ನಂದಕಿಶೋರ ಬನಾರಿ ಮತ್ತಿತರರು ಉಪಸ್ಥಿತರಿದ್ದರು.

ನಮಿತ ಬೆಳ್ಳಿಪ್ಪಾಡಿ ಪ್ರಾರ್ಥನೆ ಹಾಡಿದರು. ಪೂಜಾಶ್ರೀ ದೇಲಂಪಾಡಿ ಸ್ವಾಗತಿಸಿದರು. ರಮಾನಂದ ರೈ ವಂದಿಸಿದರು. ಶ್ವೇತಾ ರಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಹಿರಿಯ ಯಕ್ಷಗಾನ ಕಲಾವಿದರ ನೇತೃತ್ವದಲ್ಲಿ ಶ್ರೀರಾಮ ದರ್ಶನ ಯಕ್ಷಗಾನ ತಾಳಮದ್ದಳೆ ನಡೆಯಿತು. ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಯೋಗ ಪ್ರಾತ್ಯಕ್ಷಿಕೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net