ಕೀಡಾ ಮನೋಭಾವ ಬೆಳೆಸಿಕೊಳ್ಳಲಿ

20ckd3
Published on

ಚಿಕ್ಕೋಡಿ: ವಿದ್ಯಾರ್ಥಿಗಳು ಕ್ರೀಡೆ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಕೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಿಎಲ್‌ಇ ಸಂಸ್ಥೆ ಕಾರ್ಯದರ್ಶಿ ಜಗದೀಶ ಕವಟಗಿಮಠ ಹೇಳಿದರು.

ಪಟ್ಟಣದ ಸಿಎಲ್‌ಇ ಸಂಸ್ಥೆಯ ಶತಮಾನೋತ್ಸವ ಕಟ್ಟಡದ ಸಭಾಭವನದಲ್ಲಿ ಆಯೋಜಿಸಿದ್ದ ವಿವಿಧ ಕ್ರೀಡಾಕೂಟಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ . ಭಾಗವಹಿಸುವುದು ಮುಖ್ಯ. ಇದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢ ಆಗುತ್ತಾರೆ ಎಂದು ತಿಳಿಸಿದರು.

ಮುಖ್ಯಾಧ್ಯಾಪಕ ಎಸ್.ಕೆ. ಕೊಟ್ರೆ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಈಚೆಗೆ ಇಲಾಖಾ ಮಟ್ಟದಲ್ಲಿ ಆಯೋಜಿಸಿದ್ದ ವಿವಿಧ ಕ್ರೀಡಾಕೂಟಗಳಲ್ಲಿ ಸಂಸ್ಥೆಯ 9 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಬೆಳ್ಳಿ ಮತ್ತು ಕಂಚಿನ ಪದಕ ಪಡೆದು ಸಂಸ್ಥೆ ಮತ್ತು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದರು.

ಸಮೃದ್ಧಿ ಭಜಂತ್ರಿ ಕುಸ್ತಿಯಲ್ಲಿ ಬೆಳ್ಳಿಪದಕ ಮತ್ತು ಜೂಡೋದಲ್ಲಿ ಕಂಚಿನ ಪದಕ ಪಡೆದಿದ್ದಾಳೆ. ಗಂಗವ್ವ ಡಂಗೇರ ಜುಡೋ, ಪ್ರೀಕ್ಷಾ ತಮ್ಮಣ್ಣವರ ಕುಸ್ತಿ, ಕೀರ್ತಿ ದ್ರಾಕ್ಷಿ ಚದುರಂಗ, ಜುಡೋದಲ್ಲಿ ಬಾಳಪ್ಪ ಜಿಡ್ಡಿಮನಿ, ಸಮರ್ಥ ಚಿತ್ರಗಾರ, ನೈತಿಕ ಬೋತೆ ಕುಸ್ತಿ ಅಯಾನ ಅರ್ಕಾಟೆ ಕರಾಟೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಗರ ಬಿಸ್ಕೋಪ್ ಇತರರಿದ್ದರು. 20-3

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net