ಕೆಂಪರಾಜು ಕಡೂರು ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ

web 4
Published on

ಕಡೂರು: ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಕೆ.ಎಂ.ಕೆಂಪರಾಜ್ ಮತ್ತು ಉಪಾಧ್ಯಕ್ಷರಾಗಿ ಬಳ್ಳೇಕೆರೆ ವಿಶ್ವನಾಥ್ ಅವಿರೋಧವಾಗಿ ಆಯ್ಕೆಯಾದರು.

ಕಳೆದ ವಾರ ಸಂಘದ 10 ಜನ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದರು. ಪಟ್ಟಣದ ಸಂಘದ ಕಚೇರಿಯಲ್ಲಿ ನೂತನ ಮಂಡಳಿಯಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕೆಂಪರಾಜ್ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ವೆಂಕಟೇಶ್ ಅಧ್ಯಕ್ಷ,ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೊಷಿಸಿದರು.

ನಂತರ ನಡೆದ ಅಭಿನಂದನಾ ಸಭೆಯಲ್ಲಿ ಅಧ್ಯಕ್ಷ ಕೆ.ಎಂ.ಕೆಂಪರಾಜ್ ಮಾತನಾಡಿ, ಪಟ್ಟಣದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ತನ್ನದೇ ಆದ ಇತಿಹಾಸ ಹೊಂದಿದ್ದು, ಈ ಸಂಘದ ಅಡಿಯಲ್ಲಿ ಹಲವಾರು ಯೋಜನೆಗಳು ರೈತರಿಗೆ ದೊರಕಿದೆ. ಮುಂದಿನ ದಿನಗಳಲ್ಲಿ ಈ ಸಂಘವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದರು.

ಉಪಾಧ್ಯಕ್ಷ ಬಿ.ಎಚ್.ವಿಶ್ವನಾಥ್ ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಹಲವಾರು ಜನಪರ ಕಾರ್ಯಗಳನ್ನು ನಡೆಸಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net