ನವೆಂಬರ್‌ನಲ್ಲಿ ಕೆಂಪೇಗೌಡ ದಿನಾಚರಣೆ: ಡಿಸಿಎಂ ಭರವಸೆ

palike niyoga
Published on

ಬೆಂಗಳೂರು: ವಿವಿಧ ಕಾರಣಗಳಿಂದ ಮುಂದೂಡುತ್ತಲೇ ಬರಲಾಗುತ್ತಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ನವೆಂಬರ್ ತಿಂಗಳಲ್ಲೇ ನಡೆಸಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ನಗರದ ಕುಮಾರಕೃಪಾ ಭವನದಲ್ಲಿ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಮ್ಮುಖದಲ್ಲಿ ಮಂಗಳವಾರ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ಮಾಡಿದ ಬಳಿಕ ಡಿಸಿಎಂ ಈ ನಿರ್ಧಾರ ಪ್ರಕಟಿಸಿದ್ದಾರೆ.

ಇದೇ ವೇಳೆ ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಾಮವಳಿ ಕುರಿತು ಮುಂಬಡ್ತಿ ವಿಚಾರ, ಕಾನೂನುಬಾಹಿರವಾಗಿ ಎರವಲು ಸೇವೆ ಅಧಿಕಾರಿಗಳ ವರ್ಗಾವಣೆ ಹಾಗೂ ಪಾಲಿಕೆಯಲ್ಲಿ 6,414 ಖಾಲಿ ಹುದ್ದೆಗಳ ಭರ್ತಿ ಕ್ರಮ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ-ಸಮಾನ ವೇತನ ಸೇರಿ ಹತ್ತು ಬೇಡಿಕೆಗಳನ್ನು ಈಡೇರಿಸಲು ಡಿಸಿಎಂ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್ ತಿಳಿಸಿದ್ದಾರೆ.

ಚರ್ಚೆ ವೇಳೆ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಸಾಯಿಶಂಕರ್, ಎ.ಜಿ.ಬಾಬಣ್ಣ, ಡಾ.ಶೋಭಾ, ಡಿ.ರಾಮಚಂದ್ರ, ಕೆ.ಜಿ.ರವಿ, ಬಿ.ರುದ್ರೇಶ್, ಸೋಮಶೇಖರ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net