ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಸರಾ ಆಚರಣೆ; ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ

KIA
Published on

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್​ 1 ಹಾಗೂ 2ರಲ್ಲಿ ಅದ್ಧೂರಿಯಾಗಿ ದಸರಾ ಹಬ್ಬ ಆಚರಿಸಲಾಗುತ್ತಿದೆ. ಸಂಭ್ರಮಾಚರಣೆಯ ಭಾಗವಾಗಿ ಬೆಂಗಳೂರು ವಿಮಾನ ನಿಲ್ದಾಣ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.

ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರಿಗೆ ನಾಡಿನ ಸಂಸ್ಕೃತಿಯನ್ನು ಪರಿಚಯಿಸಲು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸಾಂಸ್ಕೃತಿಕ ಕಲೆಗಳಾದ ಯಕ್ಷಗಾನ, ಕುಚುಪುಡಿ, ಡೊಳ್ಳು ಕುಣಿತ, ತಮಟೆ ವಾದ್ಯ, ಸಂಗೀತ ಕಚೇರಿ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಅ.10ರಂದು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಮತ್ತು ಕುಚುಪುಡಿ ನೃತ್ಯ ಪ್ರದರ್ಶನ, ಅ.11ರಂದು ಬೊಂಬೆ ಪ್ರದರ್ಶನ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net