

ಮೂಲ್ಕಿ: ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರದ ನಿರ್ಮಾತೃ ಎಂದು ಪರಿಗಣಿಸಲ್ಪಟ್ಟಿದ್ದಾರೆ, ಅವರ ದೂರದೃಷ್ಟಿಯ ನಾಯಕತ್ವದಿಂದ ಬೆಂಗಳೂರನ್ನು ಅಭಿವೃದ್ಧಿಪಡಿಸುವುದರ ಜತೆಗೆ ನಾಡಿನ ಪ್ರಗತಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನದ ಸಾಧನೆಗಳು ಇಂದಿಗೂ ಪ್ರೇರಣದಾಯಕ ಎಂದು ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಕೆ.ಭುವನಾಭಿರಾಮ ಉಡುಪ ಹೇಳಿದರು.
ಮೂಲ್ಕಿ ತಾಲೂಕು ಆಡಳಿತ ಸೌಧದಲ್ಲಿ ಶುಕ್ರವಾರ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಮೂಲ್ಕಿ ಉಪತಹಸೀಲ್ದಾರ್ ದಿಲೀಪ್ ರೋಡ್ಕರ್ ಮಾತನಾಡಿ, ದೂರದರ್ಶಿತ್ವ ನಾಯಕತ್ವದ ಮೂಲಕ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಾಡಪ್ರಭು ಕೆಂಪೇಗೌಡರು ಎಂದಿಗೂ ಅಜರಾಮರ ಎಂದರು.
ಕಂದಾಯ ಇಲಾಖೆ ಅಧಿಕಾರಿ ಮೋಹನ್, ತಾಲೂಕು ಆಡಳಿತ ಸಿಬ್ಬಂದಿ ಉಪಸ್ಥಿತರಿದ್ದರು.