ಮಹೇಶ ಕಾಲೇಜಿನಲ್ಲಿ ಕೆಂಪೇಗೌಡರ ಜಯಂತಿ

New Mahesh Collage new
Published on

ಹುಬ್ಬಳ್ಳಿ : ನಗರದ ಡಾ. ಆರ್.ಬಿ. ಪಾಟೀಲ ಮಹೇಶ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ಮಾತನಾಡಿ, ಕನ್ನಡಿಗರ ಗೌರವ ಸಂಕೇತವಾದ ಬೆಂಗಳೂರನ್ನು ಕಟ್ಟಿದ ಕೆಂಪೇಗೌಡರ ಜೀವನ ಚರಿತ್ರೆಯನ್ನು ಓದುವುದರ ಮೂಲಕ ಮುಂದಿನ ಜನಾಂಗಕ್ಕೆ ಅವರ ಇತಿಹಾಸ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಹಂಪಿಯ ವೈಭವವನ್ನು ಕಂಡು ಬೆರಗಾಗಿದ್ದ ಕೆಂಪೇಗೌಡರ ದೂರದೃಷ್ಠಿಯಿಂದ ನಿರ್ವಿುಸಿದ ಬೆಂಗಳೂರು ನಗರ ಕರ್ನಾಟಕದ ರಾಜಧಾನಿಯಾಗಿರುವುದಲ್ಲದೇ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿದೆ ಎಂದು ಹೇಳಿದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಐ.ಎಸ್. ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಾಂಶುಪಾಲ ರಮೇಶ ಹೊಂಬಾಳಿ ಇದ್ದರು. ವಿದ್ಯಾರ್ಥಿನಿ ಬನಶ್ರೀ ನಿರೂಪಿಸಿದರು. ಶ್ರೇಯಾ ಶಿರೂರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net