ಕೆಂಪೇಗೌಡ ಜಯಂತಿ ಆಚರಣೆ 27ರಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆ ವತಿಯಿಂದ ಜೂ. 27ರಂದು ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಅದರಂತೆ ಜಿಲ್ಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ವರ್ಷ ಕೆಂಪೇಗೌಡ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿ, ಬಹುಮಾನ ವಿತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಹುಮಾನ ವಿತರಣೆಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜಿಲ್ಲೆಯ 8 ತಾಲೂಕುಗಳಿಗೆ ತಲಾ 1 ಲಕ್ಷ ರೂ.ದಂತೆ ಅನುದಾನ ಬಿಡುಗಡೆ ಮಾಡಲಾಗಿದೆ. ಪ್ರತಿ ತಾಲೂಕಿನಲ್ಲಿ ತಹಸೀಲ್ದಾರ ನೇತೃತ್ವದಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗುವುದು. ಕೆಂಪೇಗೌಡ ಜಯಂತಿ ದಿನ ಬಹುಮಾನ ವಿತರಿಸಲಾಗುವುದು. ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಗುವುದು.
ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜೂ. 27ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್​ ಭವನದಲ್ಲಿ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತಿತರಿರುವರು. ಶಾಸಕ ಅರವಿಂದ ಬೆಲ್ಲದ, ಜಿಲ್ಲೆಯ ಜನಪ್ರತಿನಿಧಿಗಳು, ಭಾಗವಹಿಸುವರು. ಕಲಟಗಿ ಗುಡ್​ ನ್ಯೂಸ್​ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಮಹೇಶ ಹೊರಕೇರಿ ಅವರು ನಾಡಪ್ರಭು ಕೆಂಪೇಗೌಡರ ಕುರಿತು ಉಪನ್ಯಾಸ ನೀಡುವರು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net