ಕೂಡ್ಲೂರುವಿನಲ್ಲಿ ಕೆಂಪೇಗೌಡ ಜಯಂತಿ

Kempegowda Jayanti in Cuddalore
Published on

ಕುಶಾಲನಗರ:

ಕುಶಾಲನಗರ ತಾಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ
ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿಯನ್ನು ಶುಕ್ರವಾರ ಆಚರಿಸಲಾಯಿತು. ಕೆಂಪೇಗೌಡರ ಜೀವನ ಚರಿತ್ರೆ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದ ಕನ್ನಡ ಭಾಷಾ ಶಿಕ್ಷಕ ಜಿ. ಗೋಪಾಲಕೃಷ್ಣ 16 ನೇ ಶತಮಾನದಲ್ಲಿ ಆದರ್ಶ ಆಡಳಿತಗಾರರಾಗಿದ್ದ ಕೆಂಪೇಗೌಡ ಬೆಂಗಳೂರು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ ಪ್ರಸಿದ್ಧರಾಗಿದ್ದಾರೆ. ಇತಿಹಾಸ ಪುರುಷರೆನಿಸಿದ ದೂರದೃಷ್ಟಿಯ ಚಿಂತಕ ಕೆಂಪೇಗೌಡರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವ ಅವಶ್ಯಕತೆ ಇದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್, ಬೆಂಗಳೂರು ನಗರದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ದೂರದೃಷ್ಠಿಯಿಂದ ನಿರ್ಮಿಸಿದ ಬೆಂಗಳೂರು ನಗರ ಇದೀಗ ವಿಶ್ವಖ್ಯಾತಿ ಗಳಿಸಿದೆ. ಅವರ ಆಡಳಿತದ ಕೆಲಸಗಳು ಇಂದಿಗೂ ಸಹ ಸಾರ್ವಕಾಲೀಕವಾಗಿವೆ ಎಂದರು.
ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net