

ಹುಣಸೂರು: ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಆ.9ರಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಬೆಳಗ್ಗೆ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಶಾಸಕ ಜಿ.ಡಿ.ಹರೀಶ್‌ಗೌಡ ಉದ್ಘಾಟಿಸಲಿದ್ದಾರೆ.
ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಶಾಸಕ ಜಿ.ಟಿ.ದೇವೇಗೌಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಪುಷ್ಪಾರ್ಚನೆ ಮಾಡಲಿದ್ದಾರೆ. ಸಂಘದ ತಾಲೂಕು ಅಧ್ಯಕ್ಷ ಕೆ.ಗಣೇಶ್‌ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ರಾಂತ ಪ್ರಾಂಶುಪಾಲ ಎಚ್.ಆರ್.ಸಿದ್ದೇಗೌಡ ಪ್ರಧಾನ ಭಾಷಣಕಾರರಾಗಿದ್ದಾರೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಇದೇ ವೇಳೆ ಪ್ರತಿಭಾ ಪುರಸ್ಕಾರ ಹಾಗೂ ಯುಪಿಎಸ್‌ಸಿ, ಸಿಎಪಿಇ, ಅಸಿಸ್ಟೆಂಟ್ ಕಮಾಂಡೆಂಟ್ ಆಗಿರುವ ತಾಲೂಕಿನ ಬನ್ನಿಕುಪ್ಪೆ-ಹೊಸೂರಿನ ಪ್ರತಿಭೆ ಶ್ರೇಯಸ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಯೋಗಾನಂದ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.