ದೂರದೃಷ್ಟಿಯ ಚಿಂತನೆ ಹೊಂದಿದ್ದ ಕೆಂಪೇಗೌಡರು

gan (18)
Published on

ಕುಂದಾಪುರ: ಕೆಂಪೇಗೌಡರು ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರನ್ನು ಕಟ್ಟಿದ್ದರಿಂದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಗುರುತಿಸಿಕೊಳ್ಳಲು ಕಾರಣವಾಗಿದೆ. ಕೆಂಪೇಗೌಡರು ಸುಭದ್ರವಾದ ರಾಜಧಾನಿಯ ನಿರ್ಮಾಣದ ಜೊತೆಗೆ ಬೆಂಗಳೂರು ಸೇರಿದಂತೆ ನಾಡಿನಾದ್ಯಂತ ಹಲವು ಕೆರೆಕಟ್ಟೆಗಳನ್ನೂ ನಿರ್ಮಿಸಿದ್ದರು. ಕೆಂಪೇಗೌಡರು ನಿರ್ಮಿಸಿದ ಕೆರೆಗಳು, ದೇವಾಲಯಗಳು ಇಂದಿಗೂ ನಮ್ಮ ಕಣ್ಣ ಮುಂದಿವೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ತಾಲೂಕು ಆಡಳಿತ ಕುಂದಾಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ಆಶ್ರಯದಲ್ಲಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ಶುಕ್ರವಾರ ಜರುಗಿದ ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ, ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ಟೋ, ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಉಪಪ್ರಾಂಶುಪಾಲ ಕಿರಣ್ ಹೆಗ್ಡೆ ಉಪಸ್ಥಿತರಿದ್ದರು. ಶಂಕರನಾರಾಯಣ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪಾಂಡುರಂಗ ಉಪನ್ಯಾಸ ನೀಡಿದರು.

ಉಪತಹಸೀಲ್ದಾರ್ ವಿನಯ್ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net