ಕೆಂಪಿಸಿದ್ದನಹುಂಡಿ ಪಿಡಿಒ ಸಿ.ಪ್ರಕಾಶ್ ಅವಿರೋಧ ಆಯ್ಕೆ

19
Published on


ಮೈಸೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಧಿಕಾರಿಗಳು ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಮೈಸೂರು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿ ಪಿಡಿಒ ಸಿ.ಪ್ರಕಾಶ್ ಅವಿರೋಧವಾಗಿ ಆಯ್ಕೆಯಾದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ರಾಜ್ಯ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳವಾರ ಮೈಸೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಘಟಕಕ್ಕೆ 2024-25 ರಿಂದ 2027-28ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಗೌರವ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು, ಉಪಾಧ್ಯಕ್ಷರಾಗಿ ಕೆ.ಎಸ್.ಲಿಂಗರಾಜು, ಪ್ರಧಾನ ಕಾರ್ಯದರ್ಶಿಯಾಗಿ ಕೆ.ಮಹದೇವು, ಖಜಾಂಚಿಯಾಗಿ ಮಹದೇವನಾಯಕ, ಸಹ ಕಾರ್ಯದರ್ಶಿಯಾಗಿ ಗಣೇಶ್, ಸಂಟಘಟನಾ ಕಾರ್ಯದರ್ಶಿಯಾಗಿ ಟಿ.ಎ.ಮಹದೇವ, ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯದರ್ಶಿಯಾಗಿ ಕುಮಾರನಾಯ್ಕ, ಆಂತರಿಕಾ ಲೆಕ್ಕ ಪರಿಶೋಧಕರಾಗಿ ತಾರ, ರಾಜ್ಯ ಪರಿಷತ್ ಸದಸ್ಯರಾಗಿ ಎನ್.ಇ.ಚಂದ್ರಕಾಂತ್ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಡಾ.ಎಸ್.ಸುರೇಶ್ ಕಾರ್ಯ ನಿರ್ವಹಿಸಿದರು. ಪಿಡಿಒ ಸಂಘದ ರಾಜ್ಯ ಪರಿಷತ್ ಸದಸ್ಯ ಶ್ರೀನಿವಾಸ್ ಹಾಗೂ ರಾಮಣ್ಣ, ಗಿರಿಧರ್, ಕವಿತಾ, ರಾಮದಾಸ್, ಮಂಜುಳಾ, ಮಹದೇವಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಿನ ಪಿಡಿಒಗಳು, ಕಾರ್ಯದರ್ಶಿಗಳು, ಎಸ್‌ಡಿಎಎ, ಡಿಇಒಗಳು, ಬಿಲ್ ಕಲೆಕ್ಟರ್‌ಗಳು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net