ಜ.8ರಿಂದ ಕೆಮ್ತೂರು ತುಳು ನಾಟಕ ಪರ್ಬ

udp-3-tulu
Published on

ಉಡುಪಿ : ತುಳು ಕೂಟ ಆಶ್ರಯದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸ್ಮಾರಕ ತುಳು ನಾಟಕ ಸ್ಪರ್ಧೆ ಜನವರಿ 8 ರಿಂದ 14ರ ತನಕ ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಆಯೋಜಿಸಲಾಗಿದೆ. ತುಳುನಾಟಕ ಸ್ಪರ್ಧೆಗೆ ಒಟ್ಟು ಏಳು ವಿವಿಧ ತಂಡಗಳನ್ನು ಆಯ್ಕೆ ಮಾಡಿ, ನಾಟಕಗಳನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತುಳುಕೂಟ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜ. 8ರಂದು ಸಾಯಂಕಾಲ 5ಗಂಟೆಗೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ತುಳುಕೂಟದ ಅಧ್ಯಕ್ಷ ಬಿ.ಜಯಕರ್ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್‌ಪಾಲ್ ಎ.ಸುವರ್ಣ, ಉದ್ಯಮಿ ಪ್ರಸಾದ್‌ರಾಜ್ ಕಾಂಚನ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಉಡುಪಿ ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಪೆರ್ಡೂರು ರಂಗ ಸಿಂಧೂರ ತಂಡದ ರಮೇಶ್ ಆಚಾರ್ ನಿರ್ದೇಶನದ ಬಯ್ಯಮಲ್ಲಿಗೆ ನಾಟಕ ಪ್ರದರ್ಶನಗೊಳ್ಳಲಿದೆ.  ಜ.9ರಂದು 6.30ಕ್ಕೆ ಪಟ್ಲ ಭೂಮಿಗೀತ ಸಾಂಸ್ಕೃತಿಕ ವೇದಿಕೆಯ ಸಂತೋಷ್ ನಾಯಕ್ ಪಟ್ಟಿ ನಿರ್ದೇಶನದ ಹೇ ರಾಮ್ ನಾಟಕ ಪ್ರದರ್ಶನಗೊಳ್ಳಲಿದೆ. ಜ.10ರಂದು  6.30ಕ್ಕೆ ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ ನಾಗರಾಜ್ ವರ್ಕಾಡಿ ನಿರ್ದೇಶನದ ಮಹಿಮೆದ ಸಿರಿಕುಲು ನಾಟಕ ಪ್ರದರ್ಶನಗೊಳ್ಳಲಿದೆ. ಜ.11ರಂದು ಸಂಜೆ 6.30ಕ್ಕೆ ಕೊಡವೂರು ವನಸುಮ ರಂಗಮಂಚ ತಂಡದ ಬಾಲಕೃಷ್ಣ ಕೊಡವೂರು ನಿರ್ದೇಶನದ ಸಮಾರನ ಸಡಕ್ಷ ಬುಡದಿ ನಾಟಕ ಪ್ರದರ್ಶನಗೊಳ್ಳಲಿದೆ. ಜ.12ರಂದು  6.30ಕ್ಕೆ ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ರಾಜೇಶ್ ಭಟ್ ಪಣಿಯಾಡಿ ನಿರ್ದೇಶನದ ಅಜ್ಜಯ್ಯನ ಕಥೆ ಕೇಳ್ವರಾ ನಾಟಕ ಪ್ರದರ್ಶನ ಗೊಳ್ಳಲಿದೆ. ಜ.13ರಂದು 6.30ಕ್ಕೆ ಅಮೋಘ ಹಿರಿಯಡ್ಕ ತಂಡದ ಪ್ರದೀಪ್ ಚಂದ್ರ ಕುತ್ಪಾಡಿ ನಿರ್ದೇಶನದ ರೈಲುಭೂತ ನಾಟಕ ಪ್ರದರ್ಶನಗೊಳ್ಳಲಿದೆ. ಜ.14ರಂದು ಸುಮನಸಾ ಕೊಡವೂರು ಸಂಸ್ಥೆಯ ಜೋಸಫ್ ನೀನಾಸಂ ನಿರ್ದೇಶನದ ಸುಳಿಸುರುಳಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.

ನಾಟಕ ಸ್ಪರ್ಧೆಯಲ್ಲಿ ವಿಜೇತ ತಂಡಗಳಿಗೆ ಪ್ರಥಮ 20 ಸಾವಿರ ರೂ., ದ್ವಿತೀಯ 15 ಸಾವಿರ ರೂ. , ತೃತೀಯ 10 ಸಾವಿರ ರೂ.  ನಗದು ಬಹುಮಾನ ನೀಡಲಾಗುತ್ತದೆ. ನಿರ್ದೇಶನ, ಸಂಗೀತ, ರಂಗವಿನ್ಯಾಸ, ಬೆಳಕು, ನಟ, ನಟಿ ವಿಭಾಗಗಳಲ್ಲಿ ಪ್ರಥಮ ರೂ. 1,000  ಮತ್ತು ದ್ವಿತೀಯ, ತೃತೀಯ ಬಹುಮಾನಗಳನ್ನು  ವಿತರಿಸಲಾಗುವುದು, ಸ್ಪರ್ಧೆಗೆ ಆಯ್ಕೆಯಾದ ರಾಜ್ಯದೊಳಗಿನ ತಂಡಗಳಿಗೆ ರೂ. 5,000 ಹಾಗೂ ಹೊರರಾಜ್ಯದ ತಂಡಗಳಿಗೆ ರೂ. 10,000 ಭತ್ಯೆಯೊಂದಿಗೆ ಊಟ ಉಪಚಾರ ಮತ್ತು ಉತ್ತಮ ಸೌಕರ್ಯಗಳನ್ನು ಉಡುಪಿ ತುಳುಕೂಟದ ವತಿಯಿಂದ ಒದಗಿಸಲಾಗುವುದು ಎಂದು ತಿಳಿಸಿದರು.  ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಸಂಚಾಲಕ ಬಿ. ಪ್ರಭಾಕರ ಭಂಡಾರಿ, ದಿವಾಕರ ಸನಿಲ್, ಪ್ರಕಾಶ್ ಸುವರ್ಣ ಕಟಪಾಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net