ಕೆಂಚನಾಲ ಮಾರಿಕಾಂಬಾ ಜಾತ್ರೆ ಸಂಪನ್ನ

11 RPT 1
ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಮಾರಿಕಾಂಬಾ ದೇವಿಯ ವಿಶೇಷ ಅಲಂಕಾರ.
Published on

ರಿಪ್ಪನ್‌ಪೇಟೆ: ಕೆಂಚನಾಲ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರೆ ಮಂಗಳವಾರ ಅದ್ದೂರಿಯಾಗಿ ಜರುಗಿತು. ದೇವಿಯ ಮೂರ್ತಿಯನ್ನು ಸಾಂಪ್ರದಾಯಿಕ ಮಂಗಳವಾದ್ಯಗಳ ಸಹಿತ ದೇವಸ್ಥಾನದಲ್ಲಿ ವಿಶೇಷ ಪೂಜೆ ನೇರವೇರಿತು. ಬೆಳಗ್ಗೆಯಿಂದಲೇ ಭಕ್ತರು ತಂಡೋಪತಂಡವಾಗಿ ಆಗಮಿಸಿ ದರ್ಶನ ಪಡೆದು ಹಣ್ಣುಕಾಯಿ ಸಮರ್ಪಿಸಿದರು.

ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಶಕ್ತಿ ದೇವತೆ ಮಾರಿಕಾಂಬಾ ದೇವಿಗೆ ಜಾತಿ ಭೇದವಿಲ್ಲದೆ ಭಕ್ತರು ಪೂಜಿಸುವುದು ಇಲ್ಲಿನ ಪದ್ಧತಿ. ಉತ್ತಮ ಬೆಳೆ, ಆರ್ಥಿಕ ಪ್ರಗತಿ, ಕುಟುಂಬ ಸೌಖ್ಯ, ಜಾನುವಾರುಗಳ ಕ್ಷೇಮ, ಜೀವನ ನಿರ್ವಹಣೆಗೆ ತೊಂದರೆ ಆಗದಂತೆ ಭಕ್ತರು ಪ್ರಾರ್ಥಿಸುತ್ತಾರೆ. ನವ ದಂಪತಿಗಳು ಜಾತ್ರೆಗೆ ಬಂದು ದೇವಿದರ್ಶನ ಪಡೆದು ಹರಕೆ ಸಲ್ಲಿಸುವುದು ಇಲ್ಲಿನ ವಿಶೇಷ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net