ಕೆಂಗಲ್ ಹನುಮಂತಯ್ಯ ರಾಜ್ಯ ಪ್ರಶಸ್ತಿ ಪ್ರಕಟ

kengal award (1)
Published on

ಬೆಂಗಳೂರು: ಬೆಂಗಳೂರಿನ ಸಮರ್ಥ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಪ್ರಸಕ್ತ ಸಾಲಿನ ಕೆಂಗಲ್ ಹನುಮಂತಯ್ಯ ರಾಜ್ಯ ಪ್ರಶಸ್ತಿ ಪ್ರಕಟಗೊಂಡಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಗಣಪತಿ ಗೋಚಲವಾದಿ, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಕೆ.ಟಿ.ರಮೇಶ್ ಸೇರಿ ರಾಜ್ಯಾದ್ಯಂತ ವಿವಿಧ ಕ್ಷೇತ್ರಗಳ 40 ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರಿನ ಶೇಷಾದ್ರಿಪುರಂ ಕಾಂಪೋಜಿಟ್ ಕಾಲೇಜು ಸಭಾಂಗಣದಲ್ಲಿ ಅ. 15ರಂದು ಬೆಳಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ವಿಜಯವಾಣಿ ಪತ್ರಿಕೆ ಸಂಪಾದಕ ಕೆ.ಎನ್. ಚನ್ನೇಗೌಡ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶೇಷಾದ್ರಿಪುರಂ ಶಿಕ್ಷಣ ಸಂಸ್ಥೆ ಗೌರವ ಕಾರ್ಯದರ್ಶಿ ನಾಡೋಜ ಡಾ. ವೂಡೇ ಪಿ. ಕೃಷ್ಣ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ, ರಮಣಶ್ರೀ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಸ್. ಷಡಕ್ಷರಿ, ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿನಿರತರ ಸಂಘದ ಅಧ್ಯಕ್ಷ ಡಿ. ಸುಬ್ರಮಣ್ಯ ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಎಸ್.ಆರ್. ವಿಜಯ ಸಮರ್ಥ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net