ಶಿವಣ್ಣಗೆ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪ್ರದಾನ

ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ  ಪ್ರಶಸ್ತಿ ಪಡೆದ ಶಿವಣ್ಣ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದು ಹೀಗೆ.
ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪಡೆದ ಶಿವಣ್ಣ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದು ಹೀಗೆ.
Published on

ವಿರಾಜಪೇಟೆ: ಕುಟ್ಟಂದಿಯ ಕೆ.ಬಿ.ಪ್ರೌಢಶಾಲೆಯಲ್ಲಿ 30 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಎಸ್.ಶಿವಣ್ಣ ಅವರಿಗೆ ಶ್ರೀ ಕೆಂಗಲ್ ಹನುಮಂತಯ್ಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರತಿ ವರ್ಷ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ರಾಜ್ಯದ ಎಲ್ಲ ಜಿಲ್ಲೆಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿದ್ದು, ಈ ಬಾರಿ ಕೊಡಗು ಜಿಲ್ಲೆಯಿಂದ ಶಿವಣ್ಣ ಅವರನ್ನು ಆಯ್ಕೆ ಮಾಡಲಾಗಿತ್ತು. ವಿಧಾನಸೌಧದ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಪ್ರಮುಖರು ಹಾಗೂ ಮುಖ್ಯ ಅತಿಥಿಗಳು ಪ್ರಶಸ್ತಿ ಪ್ರದಾನ ಮಾಡಿದರು.

ಹವ್ಯಾಸಿ ರಂಗಭೂಮಿ ಕಲಾವಿದರು, ಹಾಡುಗಾರರೂ ಆಗಿರುವ ಶಿವಣ್ಣ ಅವರು ಭಾರತ ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ನಿವೃತ್ತಿ ಹೊಂದಿರುವ ಇವರು ಕಿರುತೆರೆಯ ಧಾರಾವಾಹಿಯೊಂದರಲ್ಲಿ ಅಭಿನಯಿಸುವ ತಯಾರಿಯಲ್ಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net