ಶ್ರೀ ದೇವಿ ಇಂಜಿನಿಯರಿಂಗ್ ಕಾಲೇಜು ವಾರ್ಷಿಕೋತ್ಸವ

mng--14 may sridevo college day
Published on

ಮಂಗಳೂರು: ಕೆಂಜಾರಿನಲ್ಲಿರುವ ಶ್ರೀದೇವಿ ಎಜುಕೇಶನ್ ಟ್ರಸ್ಟ್‌ನ ಘಟಕವಾದ ಶ್ರೀ ದೇವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಾರ್ಷಿಕೋತ್ಸವ ಕಾಲೇಜಿನ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.


ಮಂಗಳೂರಿನ ಎಜೆ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಶಾಂತರಾಮ ರೈ ಸಿ. ಅತಿಥಿಯಾಗಿದ್ದರು. ವಿದ್ಯಾರ್ಥಿಯು ಶೈಕ್ಷಣಿಕ ವೃತ್ತಿಯನ್ನು ರೂಪಿಸಿಕೊಳ್ಳಲು ತಂತ್ರಜ್ಞಾನವನ್ನು ಎಷ್ಟು ಪರಿಣಾವಕಾರಿಯಾಗಿ ಬಳಸಿಕೊಳ್ಳಬಹುದು ಎಂಬುದರ ತರಬೇತಿ ಪಡೆದುಕೊಳ್ಳಬೇಕು ಎಂದರು.


ಶ್ರೀ ದೇವಿ ಎಜುಕೇಶನ್ ಟ್ರಸ್ಟ್ ನ ಉಪಧ್ಯಾಕ್ಷ ನಿಧೀಶ್ ಎಸ್ ಶೆಟ್ಟಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ಪ್ರಿಯಾಂಕ ಎನ್ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ. ಕೆ. ಇ. ಪ್ರಕಾಶ್ 2023-24 ರ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಉಪಪ್ರಾಂಶುಪಾ ಡಾ. ನೇತ್ರಾವತಿ ಪಿ ಎಸ್. ಸ್ವಾಗತಿಸಿದರು.


ಕಾಲೇಜಿನಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದಿಸಿದರು. ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಲ್ಲಿ 5ನೇ ರ‌್ಯಾಂಕ್ ಪಡೆದ ಕಾಲೇಜಿನ ಎಂಬಿಎ ವಿಭಾಗದ ವಿದ್ಯಾರ್ಥಿನಿ ದಿವ್ಯಶ್ರೀ ಎಂ. ಅವರನ್ನು ಸನ್ಮಾನಿಸಲಾಯಿತು. ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. ಶೈಕ್ಷಣಿಕ ವರ್ಷ 2023-24ರ ಅತ್ಯುತ್ತಮ ವಿದ್ಯಾರ್ಥಿ ಎಂಬ ಡಾ. ಬಿ ಆರ್ ಸಾಮಗ ಚಿನ್ನದ ಪದಕ ವನ್ನು ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಅರ್ಜುನ್ ಸತೀಶ್ ಕುಮಾರ್ ಮುಡಿಗೇರಿಸಿಕೊಂಡರು. ಶೈಕ್ಷಣಿಕ ವರ್ಷ 2023-24ರ ಅತ್ಯುತ್ತಮ ಹೊರ ಹೋಗುವ ವಿದ್ಯಾರ್ಥಿ ಪ್ರಶಸ್ತಿಯನ್ನು ಪ್ರತಿ ವಿಭಾಗದ ವಿದ್ಯಾರ್ಥಿಗಳು ಪಡೆದುಕೊಂಡರು. ಪ್ರೊ.ನಿಶಾ ಕುಟಿನ್ಹೊ ವಂದಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net