ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ - ಶಿಕ್ಷಕ ಎಂ.ಕುಂಞ ನಾಯ್ಕ ಸಲಹೆ - ಪ್ರತಿಭಾ ಪುರಸ್ಕಾರ, ವಾರ್ಷಿಕೋತ್ಸವ

PTR_31 MAR_2
Published on

ವಿಟ್ಲ: ವಿದ್ಯಾರ್ಥಿಗಳು ಶಿಸ್ತು, ಸಂಯಮ, ಸಂಸ್ಕಾರದಂತಹ ಉತ್ತಮ ಮೌಲ್ಯ ರೂಢಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿಸಲು ವಿದ್ಯಾರ್ಥಿನಿಲಯದ ಶಿಕ್ಷಣವು ಪೂರಕವಾಗಿವೆ. ಕಲಿಕೆಯ ಆಸಕ್ತಿಯನ್ನು ಪಠ್ಯ ಪುಸ್ತಕಗಳಿಗೆ ಸೀಮಿತಗೊಳಿಸದೆ ಪಠ್ಯೇತರ ಚಟುವಟಿಕೆಗಳಿಗೂ ಆಸಕ್ತಿ ಮೂಡಿಸಲು ಶಾಲಾ ವಾರ್ಷಿಕೋತ್ಸವ ಸಹಕಾರಿಯಾಗಿದೆ ಎಂದು ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಂ.ಕುಂಞ ನಾಯ್ಕ ಹೇಳಿದರು.

ಕುದ್ದುಪದವು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.

ಸುವರ್ಣ ಸಂಭ್ರಮ ಸಮಿತಿ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಬೇಂಗ್ರೋಡಿ, ಕೋಶಾಽಕಾರಿ ಎ. ಗೋವಿಂದರಾಯ ಶೆಣೈ ಅಡ್ಯನಡ್ಕ, ಕೇಪು ಗ್ರಾಮ ಪಂಚಾಯಿತಿ ಸದಸ್ಯರಾದ ಜಗಜೀವನ್‌ರಾಮ್ ಶೆಟ್ಟಿ, ಪುರುಷೋತ್ತಮ ಗೌಡ ಕಲ್ಲಂಗಳ, ಅಬ್ದುಲ್ ಕರೀಮ್ ಉಪಸ್ಥಿತರಿದ್ದರು.

ಶಿಕ್ಷಕಿ ಗೀತಾ ಕುಮಾರಿ ಸ್ವಾಗತಿಸಿದರು. ಶಾಲಾ ಮೇಲ್ವಿಚಾರಕಿ ಭವ್ಯ ಪಿ. ವರದಿ ವಾಚಿಸಿದರು. ತುಳಸಿ, ಪಲ್ಲವಿ ಜಿ., ರಂಜಿತ ಸಿ.ಜೆ. ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಮಲ್ಲಿಕಾ ಬಿ. ವಂದಿಸಿದರು. ವಾಣಿಶ್ರಿ ಎಂ. ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಿರೂಪಿಸಿದರು. ಬೋಧಕೇತರ ಸಿಬ್ಬಂದಿ ಭಾಗೀರಥಿ ಎಸ್., ರತ್ನಾ ಕೆ., ಜ್ಯೋತಿ, ಲೀಲಾ, ಧರ್ಣಮ್ಮ , ಪುಷ್ಪಲತಾ ಡಿ. ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net